More

    ಜಿಲ್ಲಾಡಳಿತದ ನಡೆ ಎನ್ನುವುದು ಸೂಕ್ತ-ಡಿಸಿ ಎಲ್.ಚಂದ್ರಶೇಖರ ನಾಯಕ ಅಭಿಮತ

    ಸಿಂಧನೂರು: ಜನರ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮ ವರದಾನವಾಗಬೇಕು. ಅರ್ಜಿ ವಿಲೇವಾರಿ ಯಾವುದೇ ಕಾರಣಕ್ಕೂ ತಡವಾಗಬಾರದೆಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು.

    ಕುನ್ನಟಗಿ ಹೋಬಳಿ ವ್ಯಾಪ್ತಿಯ ಬೊಮ್ಮನಾಳ(ಇಜೆ) ಗ್ರಾಮದ ಈಶ್ವರ ದೇವಸ್ಥಾನದ ಹತ್ತಿರ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾಧಿಕಾರಿ ನಡೆ ಎನ್ನುವುದಕ್ಕಿಂತ ಜಿಲ್ಲಾಡಳಿತದ ನಡೆ ಎನ್ನುವುದು ಸೂಕ್ತ. ಈ ಹಿಂದೆ ಸಾಕಷ್ಟು ಜನ ರೈತರು ಪಹಣಿ ತಿದ್ದುಪಡಿ, ಪಿಂಚಣಿ ಸೌಲಭ್ಯ ಸೇರಿ ವಿವಿಧ ಕೆಲಸಗಳಿಗೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಕ್ಕೆ ಬರುತ್ತಿದ್ದರು. ಕೆಲಸ ಸಮಯದಲ್ಲಿ ಅಧಿಕಾರಿಗಳು ಕಚೇರಿಯಲ್ಲಿರದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಇದನ್ನೆಲ್ಲ ಗಮನಿಸಿದ ಸರ್ಕಾರ, ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆ ಮುಟ್ಟಿಸಲು ಇಂಥ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅರ್ಜಿ ಸಲ್ಲಿಸುವ ಮೂಲಕ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದರು.

    ಶಾಸಕ ವೆಂಕಟರಾವ ನಾಡಗೌಡ ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬ ದೃಢ ನಂಬಿಕೆ ಜನರಲ್ಲಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಮಾಡಬೇಕು. ತಾಂತ್ರಿಕ ಕಾರಣಗಳಿದ್ದರೆ ಒಂದೆರಡು ದಿನಗಳಲ್ಲಿ ಇತ್ಯರ್ಥಗೊಳ್ಳಬೇಕು. ಕೇವಲ ಅರ್ಜಿ ಪಡೆಯುವುದರಿಂಧ ಜನರ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಮುಖ್ಯವಾಗಿ ಪಹಣಿಯಲ್ಲಿನ ವ್ಯತ್ಯಾಸಗಳೇ ಹೆಚ್ಚಿದ್ದು ಈ ಬಗ್ಗೆ ಗಮನಹರಿಸಬೇಕೆಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts