More

    ರೈತರ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ಸಿಗಲಿ; ಕೆಪೆಕ್ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಹೇಳಿಕೆ

    ಯೋಜನೆಗಳ ಪ್ರಚಾರ ಇಂದಿನ ಅಗತ್ಯ

    ಸಿಂಧನೂರು: ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಕನಸು ನನಸಾಗಬೇಕಾದರೆ ದೇಶದಲ್ಲಿ ಮಧ್ಯವರ್ತಿಗಳ ನಿರ್ಮೂಲನೆ ಆಗಬೇಕು. ರೈತರ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ಸಿಕ್ಕಾಗ ಮಾತ್ರ ಕೃಷಿಗೆ ಆದ್ಯತೆ ಸಿಗಲಿದೆ ಎಂದು ಕೆಪೆಕ್ ನಿಗಮದ ಅಧ್ಯಕ್ಷ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

    ಕನಕದಾಸ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಕೃಷಿ ಇಲಾಖೆ, ಕೆಪೆಕ್ ನಿಗಮ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಸುವರ್ಣಾವಕಾಶಗಳ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕೇಂದ್ರ ಸರ್ಕಾರ ಒಂದು ಜಿಲ್ಲೆ-ಒಂದು ಬೆಳೆ ಜಾರಿಗೆ ತಂದಿದೆ. ಪ್ರಥಮ ಹಂತದಲ್ಲಿ ಸಮಸ್ಯೆಗಳಾಗಬಹುದು. ಭವಿಷ್ಯದ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ಎಲ್ಲರಿಗೂ ಉದ್ಯೋಗ ಕೊಡಲು ಸಾಧ್ಯವಿಲ್ಲ. ಹೀಗಾಗಿ ಯುವ ಸಮೂಹದಲ್ಲಿ ಕೌಶಲವೃದ್ಧಿಸಿ ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗಿಗಳನ್ನಾಗಿ ಮಾಡುತ್ತಿದೆ. ಸರ್ಕಾರದ ಯೋಜನೆಗಳ ಬಗ್ಗೆ ವೇಗವಾದ ಪ್ರಚಾರ ಅಗತ್ಯವಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts