ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಕಾಂಗ್ರೆಸ್ ಕೆಂಡ

blank

ಸಿಂಧನೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿರುವ ಸಚಿವ ಡಾ.ಅಶ್ವತ್ಥನಾರಾಯಣರನ್ನು ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಶುಕ್ರವಾರ ಮನವಿ ಸಲ್ಲಿಸಿತು.

ಸಾರ್ವಜನಿಕ ಸಭೆಯಲ್ಲಿ ಸಚಿವ ಅಶ್ವತ್ಥನಾರಾಯಣ, ಟಿಪ್ಪು ಸುಲ್ತಾನ್ ರೀತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇದು ಅಕ್ಷಮ್ಯವಾಗಿದ್ದು, ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಜನಪರ ಯೋಜನೆಗಳನ್ನು ನೀಡಿದ್ದಾರೆ. ಜನರ ಸರ್ವೋತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಸಚಿವರು ಅವರ ವಿರುದ್ಧ ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಉಪಾಧ್ಯಕ್ಷ ಮುರ್ತುಜ್‌ಹುಸೇನ, ಸದಸ್ಯರಾದ ಎಚ್.ಬಾಷಾ, ಆಲಂಬಾಷಾ, ಶಬ್ಬೀರ್ ನಾಯಕ, ಶೇಖರಪ್ಪ ಗಿಣಿವಾರ, ಮುನೀರ್ ಪಾಷಾ, ಪ್ರಮುಖರಾದ ರಾಜಗೌಡ ಬಾದರ್ಲಿ, ಚಂದ್ರಶೇಖರ ಕನಸಾವಿ, ದಶರಥರಡ್ಡಿ ಚನ್ನಳ್ಳಿ, ನಿರುಪಾದೆಪ್ಪ ಗುಡಿಹಾಳ, ಹನುಮೇಶ ನಾಯಕ, ಶೇಖರಪ್ಪ ಧುಮತಿ, ದುರುಗಪ್ಪ ಕಟಾಲಿ, ಕನಕಪ್ಪ ನಾಯಕ, ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಣಿ ಮಾಲಿ ಪಾಟೀಲ್ ಇತರರು ಇದ್ದರು.

Share This Article

ಭಾರತದ ನೋಟಿನಲ್ಲಿರುವ ಮಹಾತ್ಮ ಗಾಂಧಿಜಿ ಅವರ ಫೋಟೋ ಕ್ಲಿಕ್ಕಿಸಿದ್ದು ಯಾವಾಗ & ಎಲ್ಲಿ?; ಇಲ್ಲಿದೆ ಸಂಪೂರ್ಣ ಮಾಹಿತಿ | Information

ಭಾರತದ ನೋಟಿನಲ್ಲಿ ಮಹಾತ್ಮ ಗಾಂಧಿ ಅವರ ಫೋಟೋವನ್ನು ನೀವು ನೋಡಿರಬಹುದು. ಆದರೆ ನೋಟಿನ ಮೇಲೆ ನಗುತ್ತಿರುವ…

ಇಬ್ಬನಿಯಿಂದ ಚಳಿಗಾಲದಲ್ಲಿ ತುಳಸಿ ಗಿಡ ಹಾಳಾಗುತ್ತಿದೆಯೇ?; ಆರೈಕೆಗಾಗಿ ಇಲ್ಲಿದೆ ಸಿಂಪಲ್​ ಟ್ರಿಕ್​​ | Health Tips

ತುಳಸಿಯು ಔಷಧೀಯ ಸಸ್ಯವಾಗಿರುವುದರ ಜತೆಗೆ ಧಾರ್ಮಿಕ ನಂಬಿಕೆಗಳನ್ನೂ ಹೊಂದಿದೆ. ಈ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ…

ಬಿಪಿ ಹೆಚ್ಚಾಗಲು ಈ ಆಹಾರ ಪದಾರ್ಥಗಳು ಕಾರಣವೇ; ತಜ್ಞರು ಹೇಳಿದ್ದೇನು? | Health Tips

ನೂಡಲ್ಸ್, ಪಾಪಡ್, ಉಪ್ಪಿನಕಾಯಿ, ಸಾಸ್ ಮತ್ತು ನಮ್ಕೀನ್ ಬಹುತೇಕ ಈ ಎಲ್ಲಾ ಆಹಾರ ಪದಾರ್ಥಗಳು ಪ್ರತಿಯೊಬ್ಬರ…