More

    ಸರ್ಕಾರ ಭತ್ತ ಖರೀದಿ ಕೇಂದ್ರ ತೆರೆಯಲಿ; ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ


    ಸಿಂಧನೂರು: ಭತ್ತ ಖರೀದಿ ಕೇಂದ್ರ ಆರಂಭ ರೈತರ ಜಮೀನುಗಳಿಗೆ ಸಮರ್ಪಕ ನೀರು ಪೂರೈಕೆ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಒತ್ತಾಯಿಸಿದೆ.
    ಎಪಿಎಂಸಿ ಶ್ರೀ ಗಣೇಶ ದೇವಸ್ಥಾನದಿಂದ ತಹಸಿಲ್ ಕಚೇರಿವರೆಗೆ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿತು.

    ನವೆಂಬರ್‌ನಲ್ಲಿ ಭತ್ತ ಕಟಾವು ಆಗಲಿದ್ದು ಅಷ್ಟರೊಳಗೆ ಎಲ್ಲ ತಾಲೂಕು, ಹೋಬಳಿ ವ್ಯಾಪ್ತಿಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯುವುದು ಅವಶ್ಯಕವಾಗಿದೆ. ಈ ಕೂಡಲೇ ಜಿಲ್ಲಾಧಿಕಾರಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು. ಟೇಲೆಂಡ್ ಭಾಗದಲ್ಲಿ ಬೆಳೆದು ನಿಂತಿರುವ ಜೋಳದ ಬೆಳೆಗೆ ನೀರಿನ ಕೊರತೆ ಎದುರಾಗಿದೆ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ನೀರು ಬಿಡುವಂತೆ ಪ್ರತಿಭಟನೆ ಮಾಡಿದ್ದರೂ ಇದುವರೆಗೆ ನೀರು ಹರಿಸದಿದ್ದರಿಂದ ಶೇ.20 ಜೋಳದ ಬೆಳೆ ಒಣಗಿದೆ. ರೈತರ ಜಮೀನುಗಳಿಗೆ ಸರಿಯಾದ ರಸ್ತೆ ಇಲ್ಲದ ಕಾರಣ ಉತ್ಪನ್ನದ ಸಾಗಣೆ ಮಾಡಲು ಸಾಕಷ್ಟು ತೊಂದರೆಯಾಗುತ್ತಿದೆ. ಕೂಡಲೇ ಶಾಶ್ವತ ರಸ್ತೆ ನಿರ್ಮಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts