More

    ಭತ್ತದ ಖರೀದಿ ಕೇಂದ್ರ ಆರಂಭಿಸುವಂತೆ ಸಿಎಂಗೆ ಶಾಸಕ ನಾಡಗೌಡ ಮನವಿ

    ಸಿಂಧನೂರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಕಟಾವಿಗೆ ಬಂದಿದ್ದು ಕೂಡಲೇ ಭತ್ತದ ಖರೀದಿ ಕೇಂದ್ರ ತೆರೆಯುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಶಾಸಕ ವೆಂಕಟರಾವ ನಾಡಗೌಡ ಮನವಿ ಸಲ್ಲಿಸಿದರು.

    ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ತುಂಗಭದ್ರಾ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ನಾಲೆ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಕಟಾವು ನಡೆದಿದೆ. ರೈತರ ಭತ್ತ ಮಾರುಕಟ್ಟೆಗೆ ಬರುವುದರೊಳಗಾಗಿ ಭತ್ತದ ಖರೀದಿ ಕೇಂದ್ರ ತೆರೆದರೆ ರೈತರಿಗೆ ಅನುಕೂಲವಾಗಲಿದೆ. ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳಗೊಳ್ಳಲಿದೆ. ತಡವಾಗಿ ಭತ್ತ ಖರೀದಿ ಕೇಂದ್ರ ಆರಂಭಗೊಂಡರೆ ರೈತರಿಗೆ ಲಾಭವಾಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts