More

    ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ; ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಅನಿಸಿಕೆ

    ಸಿಂಧನೂರು: ಮಾದಿಗ ಸಮುದಾಯವನ್ನು ಮೇಲೆತ್ತುವ ಹಾಗೂ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾದಿಗ ನೌಕರರ ಸಂಘ ಮಾಡುತ್ತಿರುವುದು ಶ್ಲಾಘನೀಯ ಎಂದು ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಹೇಳಿದರು.

    ಸ್ಥಳೀಯ ಬಾಬಾ ರಾಮ್‌ದೇವ್ ಭವನದಲ್ಲಿ ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಆಯೋಜಿಸಿದ್ದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಸಾಧನೆಗೆ ಬಡತನ ಎಂದಿಗೂ ಅಡ್ಡಿಯಲ್ಲ. ನಿರಂತರ ಅಧ್ಯಯನಶೀಲತೆ, ಪರಿಶ್ರಮವಿದ್ದರೆ ಯಶಸ್ಸು ಸುಲಭವಾಗಲಿದೆ ಎಂದರು.

    ಕನಕಗಿರಿ ಶಾಸಕ ಬಸವರಾಜ ದಢೇಸುಗೂರು ಮಾತನಾಡಿ, 10 ವರ್ಷಗಳ ಹಿಂದೆ ಇದೇ ಭವನದಲ್ಲಿ ನಡೆದ ಸಭೆಯಲ್ಲಿ ಮಾದಿಗ ಸಮುದಾಯಕ್ಕಾಗಿ 2 ಎಕರೆ ಜಮೀನು ಕೊಡಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ಜಮೀನು ಗುರುತಿಸಿದರೆ ಖರೀದಿಸಿ ನೀಡುತ್ತೇನೆ. ಮಕ್ಕಳು ಸಮುದಾಯದ ಆಸ್ತಿಯಾಗಿದ್ದು, ಅವರ ಮುಂದೆ ರಾಜಕಾರಣ ಮಾಡುವುದಿಲ್ಲ ಎಂದು ತಿಳಿಸಿದರು.

    ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ನರಸಪ್ಪ ಭಂಡಾರಿ ಮಾತನಾಡಿ, ಹಣ, ಅಂತಸ್ತು, ಅಧಿಕಾರವನ್ನು ಕಸಿದುಕೊಳ್ಳಬಹುದು. ಆದರೆ ವಿದ್ಯೆ, ಜ್ಞಾನವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು. 70ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts