More

    ದರ ಏರಿಕೆಯಿಂದ ಜನ ಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗಿದೆ ಎಂದ ಮಾಜಿ ಶಾಸಕ ಹಂಪನಗೌಡ ಬಾದರ್ಲಿ

    ಸಿಂಧನೂರು: ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸ್ಥಳೀಯ ರುದ್ರಗೌಡ ಪೆಟ್ರೋಲ್, ಶ್ರೀ ಶರಣಬಸವೇಶ್ವರ ಪೆಟ್ರೋಲ್ ಬಂಕ್ ಮುಂದೆ ಶನಿವಾರ ಪ್ರತಿಭಟನೆ ನಡೆಸಿತು.

    ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ತೈಲ ಬೆಲೆ ನಿಯಂತ್ರಣ ಸಾಧ್ಯವಾಗಿಲ್ಲ. ಇದರಿಂದ ಜನ ಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗಿದೆ ಎಂದು ದೂರಿದರು.

    ಮುಖಂಡ ಎಂ.ಲಿಂಗಪ್ಪ ದಢೇಸುಗೂರು ಮಾತನಾಡಿದರು. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಉಪಾಧ್ಯಕ್ಷ ಮುರ್ತುಜ್‌ಹುಸೇನ, ಮಹಿಳಾ ಘಟಕ ಅಧ್ಯಕ್ಷೆ ರತ್ನಮ್ಮ ಬಂಗಾರಶೆಟ್ರ, ನಗರಸಭೆ ಮಾಜಿ ಅಧ್ಯಕ್ಷ ಸೈಯ್ಯದ್ ಜಾಫರ ಜಹಗೀರದಾರ, ಜಿಪಂ ಸದಸ್ಯ ಬಾಬುಗೌಡ ಬಾದರ್ಲಿ, ನಗರಸಭೆ ಸದಸ್ಯ ಶೇಖರಪ್ಪ ಗಿಣಿವಾರ, ಶರಣಪ್ಪ ಉಪ್ಪಲದೊಡ್ಡಿ, ಹೆಚ್.ಬಾಷಾ, ಮುಖಂಡರಾದ ಸುರೇಶ ಜಾದವ, ಮುನೀರ್, ಪಂಪನಗೌಡ ಎಲೆಕೂಡ್ಲಿಗಿ, ಪ್ರಭುರಾಜ, ರಮೇಶ ಬಾಲಿ ಇತರರು ಇದ್ದರು.

    ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ: ಯುವ ಕಾಂಗ್ರೆಸ್‌ದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಮಾತನಾಡಿ, ದೇಶದಲ್ಲಿ ಅಚ್ಚೇ ದಿನ್ ಆಯೇಗಾ ಎಂಬ ಬಿಜೆಪಿಯ ಭರವಸೆ ನಂಬಿ ಜನ ಅವರನ್ನು ಚುನಾಯಿಸಿದರು. ಅವರು ಜನರ ಸಮಸ್ಯೆಗೆ ಧ್ವನಿಯಾಗದೇ ಬಡ ಜನರ ಮೇಲೆ ಬರೆ ಎಳೆಯಲು ಮುಂದಾಗಿದ್ದಾರೆ ಎಂದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ, ಕಾಂಗ್ರೆಸ್ ಹಿರಿಯ ಮುಖಂಡ ಶಿವಕುಮಾರ್ ಜವಳಿ, ಕಾಂಗ್ರೆಸ್ ಎಸ್ಟಿ ಸೆಲ್‌ನ ಕಾರ್ಯದರ್ಶಿ ವೆಂಕಟೇಶ್ ರಾಗಲಪರ್ವಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಣಿ ಬಸನಗೌಡ ಮಾ.ಪಾ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಖಾಜಾಹುಸೇನ್ ರೌಡಕುಂದಾ, ಎಚ್.ಎನ್.ಬಡಿಗೇರ, ಶರಣಯ್ಯಸ್ವಾಮಿ ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts