More

    ವಿಷಯ ತಜ್ಞರ ಸಲಹೆ ಪಡೆದುಕೊಳ್ಳುವುದು ಅಗತ್ಯ; ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಲ್ಲಯ್ಯ ಸಾಲಗುಂದ ಸಲಹೆ

    ಸಿಂಧನೂರು: ಸಹಕಾರ ಸಂಘದಲ್ಲಿ ಕಾಯ್ದೆ, ನಿಯಮ ಮತ್ತು ಉಪನಿಯಮಗಳಲ್ಲಿನ ಅಂಶಗಳನ್ನು ಅಳವಡಿಕೊಂಡು ಕಾರ್ಯನಿರ್ವಹಿಸಿದರೆ ಸಂಘ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಲ್ಲಯ್ಯ ಸಾಲಗುಂದ ಹೇಳಿದರು.

    ನಗರದಲ್ಲಿರುವ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಹಾಗೂ ಸಿಂಧನೂರು ಉಪ ವಿಭಾಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಏಕರೂಪದ ಉಪನಿಯಮಗಳು ಅಳವಡಿಕೆ ಕುರಿತು ಸಂಘದ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಾಹರುಗಳಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.

    ಸಹಕಾರ ಸಂಘದ ನೋಂದಣಿಗೆ ಬೇಕಾಗುವ ದಾಖಲೆಗಳ ಕ್ರೂಢೀಕರಿಸಿಕೊಳ್ಳಬೇಕು. ರಾಜ್ಯ ಸಹಕಾರ ಮಹಾಮಂಡಳ ಏರ್ಪಡಿಸುವ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಷಯ ತಜ್ಞರಿಂದ ಅಗತ್ಯ ಸಲಹೆ ಪಡೆದುಕೊಳ್ಳಬೇಕೆಂದು ಮಲ್ಲಯ್ಯ ಸಾಲಗುಂದ ತಿಳಿಸಿದರು.

    ಆರ್‌ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಶರಣಪ್ಪ ಹಳೇಮನಿ ಮಾತನಾಡಿ, ಬ್ಯಾಂಕಿನಿಂದ ಸಹಕಾರ ಸಂಘಗಳ ಮೂಲಕ ಶೂನ್ಯ ಮತ್ತು ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಾಲದ ರೂಪದಲ್ಲಿ ಅಗತ್ಯ ಆರ್ಥಿಕ ಸಹಾಯ ಮಾಡಲಾಗುವುದು. ಈ ಮೂಲಕ ರೈತರ ಸ್ವಾವಲಂಬಿ ಜೀವನ ನಿರ್ವಹಣೆಗೆ ಅನುಕೂಲ ಕಲ್ಪಿಸಲಾಗುತ್ತಿದೆ. ಸಾಲ ಪಡೆದ ರೈತರು ಸಕಾಲದಲ್ಲಿ ಮರುಪಾವತಿ ಮಾಡಿ ಸಂಘದೊಂದಿಗೆ ಸ್ವಯಂ ಅಭಿವೃದ್ಧಿ ಮಾಡಿಕೊಳ್ಳಬೇಕೆಂದರು. ಸಿಂಧನೂರು, ಲಿಂಗಸುಗೂರು ಮತ್ತು ಮಸ್ಕಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಸಿಇಒ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts