ಸಿಂಧನೂರು ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ ಪ್ರಸ್ತಾವನೆ

Sindhanour govt hospital upgrade
ಸಿಂಧನೂರಿನ ಸುಕಾಲಪೇಟೆ ರಸ್ತೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಸೋಮವಾರ ನಮ್ಮ ಕ್ಲಿನಿಕ್ ಉದ್ಘಾಟಿಸಿದರು. ಮೊಣಕಾಲು ಮರು ಜೋಡಣಾ ರಾಜ್ಯ ಸಮಿತಿ ಅಧ್ಯಕ್ಷ ಡಾ.ವಿಜಯಕುಮಾರ್ ಡಿ., ಮುಖ್ಯ ವೈದ್ಯಾಧಿಕಾರಿ ನಾಗರಾಜ ಕಾಟ್ವಾ, ನಗರಸಭೆ ಉಪಾಧ್ಯಕ್ಷೆ ಮಂಜುಳಾ ಪ್ರಭುರಾಜ ಕರ್ಪೂರಮಠ ಇದ್ದರು.
Published on

ಸಿಂಧನೂರು: ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಮೊದಲ ಸಲ ಉಚಿತವಾಗಿ ಮೊಣಕಾಲು ಮರು ಜೋಡಣಾ ಶಸ್ತ್ರಚಿಕಿತ್ಸೆ ಮಾಡಿರುವುದು ಸಂತಸದ ಸಂಗತಿ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸಾಕಷ್ಟು ಬದಲಾವಣೆಗಳನ್ನು ತರುತ್ತಿದ್ದಾರೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊಣಕಾಲು ಮರು ಜೋಡಣಾ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೊಣಕಾಲು ಮರು ಜೋಡಣಾ ರಾಜ್ಯ ಸಮಿತಿ ರಚನೆ ಮಾಡಿ, ಈ ತಂಡದ ಮೂಲಕ ಬಡವರ ಬಗ್ಗೆ ಆರೋಗ್ಯ ಕಾಳಜಿವಹಿಸಲಾಗಿದೆ.

ಸಮಿತಿ ಅಧ್ಯಕ್ಷ ಡಾ.ವಿಜಯಕುಮಾರ್ ಅವರು ಸಿಂಧನೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದು, ಅವರ ಮೂಲಕವೇ ಚಿಕಿತ್ಸೆ ಕೈಗೊಂಡಿರುವುದು ವಿಶೇಷವಾಗಿದೆ. ಪ್ರಸ್ತುತ ಸಾರ್ವಜನಿಕ ಆಸ್ಪತ್ರೆಯು 100 ಹಾಸಿಗೆ ಹೊಂದಿದ್ದು, ರೋಗಿಗಳ ಸಂಖ್ಯೆ ಹೆಚ್ಚಳದಿಂದ ಸಮಸ್ಯೆಯಾಗುತ್ತಿದೆ. ಆದ್ದರಿಂದ 250 ಹಾಸಿಗೆ ಹೆಚ್ಚಿಸಿ ಮೇಲ್ದರ್ಜೆಗೇರಿಸಲು ಸಿಎಂ ಹಾಗೂ ಆರೋಗ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಟಿಎಚ್‌ಒ ಡಾ.ವೆಂಕಟೇಶ, ಮೊಣಕಾಲು ಮರು ಜೋಡಣಾ ರಾಜ್ಯ ಸಮಿತಿ ಅಧ್ಯಕ್ಷ ಡಾ. ವಿಜಯಕುಮಾರ್ ಡಿ., ಮುಖ್ಯ ವೈದ್ಯಾಧಿಕಾರಿ ನಾಗರಾಜ ಕಾಟ್ವಾ, ಡಾ.ಕೋನಿಕಾ ಕಾಟ್ವಾ, ನಗರಸಭೆ ಉಪಾಧ್ಯಕ್ಷೆ ಮಂಜುಳಾ ಪ್ರಭುರಾಜ ಕರ್ಪೂರಮಠ ಇದ್ದರು. ಬಳಿಕ ಸುಕಾಲಪೇಟೆ ರಸ್ತೆಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net