More

    9 ತಾಸು ತ್ರಿಫೇಸ್ ವಿದ್ಯುತ್ ಪೂರೈಸಿ

    ಸಿಂಧನೂರು: ಪಂಪ್‌ಸೆಟ್ ಸೇರಿ ಇತರ ಕೃಷಿ ಚಟುವಟಿಕೆಗಳಿಗೆ ನಿರಂತರ 9 ತಾಸು ತ್ರಿಫೇಸ್ ವಿದ್ಯುತ್ ಪೂರೈಸಲು ಒತ್ತಾಯಿಸಿ ತಹಸಿಲ್ ಕಚೇರಿ ಶಿರಸ್ತೇದಾರ್ ಸಾಧಿಕ್ ಅವರಿಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಮುಖರು ಸೋಮವಾರ ಮನವಿ ಸಲ್ಲಿಸಿದರು.

    ರೈತರು ಜಮೀನುಗಳಿಗೆ ಕೊಳವೆ ಬಾವಿಗಳ ಮೂಲಕ ನೀರು ಹರಿಸುತ್ತಿದ್ದು, ಬೇಸಿಗೆ ಹಿನ್ನೆಲೆಯಲ್ಲಿ ಪದೇ ಪದೆ ವಿದ್ಯುತ್ ವ್ಯತ್ಯಯವಾಗುತ್ತಿದೆ. ಇದರಿಂದ ಬೆಳೆಗೆ ನೀರು ಜರಿಸಲು ಸಾಧ್ಯವಾಗದೆ ಬೆಳೆಗಳು ಒಣಗುತ್ತಿವೆ. ಇದರಿಂದಾಗಿ ರೈತರು ಆರ್ಥಿಕ ಸಂಕಷ್ಟದ ಭೀತಿಯಲ್ಲಿದ್ದಾರೆ.

    ತುಂಗಭದ್ರಾ ಎಡದಂಡೆ ನಾಲೆಗೆ ಮಾ.31 ವರೆಗೆ ನಿತ್ಯ 3500 ಕ್ಯೂಸೆಕ್ ನೀರು ಹರಿಸುವ ಬಗ್ಗೆ ಐಸಿಸಿ ಸಭೆಯಲ್ಲಿ ತೀರ್ಮಾನ ಮಾಡಿದ್ದು, ಸದ್ಯದ ಪ್ರಮಾಣ ತದ್ವಿರುದ್ಧವಾಗಿದೆ. ನಾಲೆಗೆ ಮಾ.20 ವರೆಗೆ ನೀರು ಬರುವುದು ಅನುಮಾನವಾಗಿದೆ. ವಾತಾವರಣದ ವೈಪರೀತ್ಯದಿಂದಾಗಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ತಾಲೂಕು ವ್ಯಾಪ್ತಿಯಲ್ಲಿ ನೀರಿನ ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಏ.20 ವರೆಗೆ ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸಬೇಕು. ನಿರ್ಲಕ್ಷ್ಯವಹಿಸಿದರೆ, ಬೆಳೆ ನಷ್ಟಕ್ಕೆ ಸರ್ಕಾರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts