More

    ಮಕ್ಕಳ ಹಕ್ಕುಗಳಿಗೆ ಚ್ಯುತಿ ಬಾರದಿರಲಿ, ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ ಸೂಚನೆ

    ಸಿಂಧನೂರು: ಮಕ್ಕಳ ಹಕ್ಕುಗಳಿಗೆ ಚ್ಯುತಿ ಬಾರದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ ಹೇಳಿದರು.

    ನಗರದ ಹೋಲಿ ಫ್ಯಾಮಿಲಿ ಚರ್ಚ್ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಎಚ್.ಮರಿಯಪ್ಪ ಹೆಡಗಿಬಾಳ ಚಾರಿಟಬಲ್ ಟ್ರಸ್ಟ್‌ನಿಂದ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಒತ್ತು ನೀಬೇಕು. ಸರ್ಕಾರ ಶಿಕ್ಷಣ, ಬಿಸಿಯೂಟ, ಬಟ್ಟೆ , ಪುಸ್ತಕಗನ್ನು ಉಚಿತವಾಗಿ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಕ್ಕಳು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನಹರಿಸಬೇಕು. ಮೊಬೈಲ್‌ಗಳಿಂದ ದೂರ ಇರುವಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

    ತಹಸೀಲ್ದಾರ್ ಅರುಣ್ ದೇಸಾಯಿ ಮಾತನಾಡಿ, ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿರಬೇಕು ಎಂದು ತಿಳಿಸಿದರು. ತುರ್ವಿಹಾಳ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸೋಮಲಿಂಗಪ್ಪ ಮಕ್ಕಳ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು. ಬಳ್ಳಾರಿ ಧರ್ಮ ಕ್ಷೇತ್ರದ ಫಾದರ ಓ.ವಿನ್ಸಂಟ್ ಅಧ್ಯಕ್ಷತೆ ವಹಿಸಿದ್ದರು.

    ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸವಿತಾ, ಆರ್ಕ್ ಲಿಟ್ಟಲ್ ಹೆವೆನ್ ಚಾರಿಟಬಲ್ ಟ್ರಸ್ಟ್‌ನ ಸಿಸ್ಟರ್ ಮರಿಯಾ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕಾಟವಾ, ಬಿಇಒ ಶರಣಪ್ಪ ವಟಗಲ್, ವಕೀಲರ ಸಂಘದ ಖಜಾಂಚಿ ವೀರಭದ್ರಗೌಡ ಸಾಲ್ಗುಂದಾ, ವಕೀಲರಾದ ಎಚ್.ಮರಿಯಪ್ಪ, ಎಂ.ಅಮರೇಗೌಡ, ಹೋಲಿಫ್ಯಾಮಿಲಿ ಚರ್ಚ್ ಉಪಾಧ್ಯಕ್ಷ ರಾಜಾಬಾಬು, ಚನ್ನಪ್ಪ ಹೆಡಗಿಬಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts