More

    ಪೊಲೀಸ್ ವೈಫಲ್ಯದಿಂದ ದರೋಡೆ ಹೆಚ್ಚಳ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಬಸನಗೌಡ ಬಾದರ್ಲಿ ಆರೋಪ

    ಸಿಂಧನೂರು: ತಾಲೂಕಿನಲ್ಲಿ ಮನೆಗಳ್ಳತನ ಮತ್ತು ದರೋಡೆ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಶಾಸಕ ಹಾಗೂ ಪೊಲೀಸ್ ಇಲಾಖೆಯ ನಿಷ್ಕ್ರಿಯ ಹಾಗೂ ಆಡಳಿತ ವೈಫಲ್ಯ ಕಾರಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ದೂರಿದರು.

    ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಆರು ತಿಂಗಳಿಂದ ತಾಲೂಕಿನಲ್ಲಿ ದರೋಡೆ ಪ್ರಕರಣಗಳು ನಡೆಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳ್ಳತನವಾಗಿವೆ. ಆದರೆ, ಶಾಸಕ ವೆಂಕಟರಾವ ನಾಡಗೌಡ ಎಷ್ಟು ಸಲ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಪೊಲೀಸರು ಎಷ್ಟು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ಜಪ್ತಿ ಮಾಡಿ ಮಾಲೀಕರಿಗೆ ಹಿಂದಿರುಗಿಸಿದ್ದಾರೆ ಎಂದು ಪ್ರಶ್ನಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚೆತ್ತುಕೊಂಡು ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಬಸನಗೌಡ ಬಾದರ್ಲಿ ಎಚ್ಚರಿಸಿದರು. ಪ್ರಮುಖರಾದ ವೆಂಕಟೇಶ ರಾಗಲಪರ್ವಿ, ಶಿವುಕುಮಾರ ಜವಳಿ, ಶರಣಯ್ಯಸ್ವಾಮಿ ಕೋಟೆ, ಚನ್ನಬಸವ ಕುಂಬಾರ, ವೀರರಾಜು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts