More

  ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ

  ಸಿಂಧನೂರು: ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ವಿಭಾಗ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಮಂಗಳವಾರ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ನಡೆಯಿತು.

  ಆಂದೋಲನ ಜಾಥಾ ಉದ್ಘಾಟಿಸಿ ಮಾತನಾಡಿದ ಟಿಎಚ್‌ಒ ಡಾ.ಅಯ್ಯನಗೌಡ ಪಾಟೀಲ್, ಜು.19ರಿಂದ ಆ.18ರವರೆಗೆ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದ್ದು ಆಶಾ ಕಾರ್ಯಕರ್ತೆಯರು ಮನೆಮನೆಗಳಿಗೆ ತೆರಳಿ ಕ್ಷಯರೋಗದ ಲಕ್ಷಣಗಳನ್ನು ಪತ್ತೆ ಹಚ್ಚಿ ಇಲಾಖೆಗೆ ಮಾಹಿತಿ ನೀಡಲಿದ್ದಾರೆ. ರೋಗ ಲಕ್ಷಣ ಕಂಡುಬಂದಲ್ಲಿ ಪರೀಕ್ಷೆಗೆ ಒಳಗಾಗಬೇಕು ಎಂದರು.

  ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗನಾಥ ಗುಡಿ, ಸಂಗನಗೌಡ ಮಾಲಿ ಪಾಟೀಲ್, ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ, ಕ್ಷಯರೋಗ ಘಟಕದ ಸಿಬ್ಬಂದಿಗಳಾದ ಅಮೀರ್, ಅಬ್ದುಲ್ ಹಮೀದ್, ನವೀನಕುಮಾರ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಬಸವರಾಜ ಇದ್ದರು.

  See also  ಸರ್ಕಾರಿ ಆಸ್ಪತ್ರೆಗೆ ಮತ್ತಷ್ಟು ಸೌಲಭ್ಯ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts