More

    ಸಮಾಜದ ಬದಲಾವಣೆಗೆ ಶ್ರಮಿಸಿದ ಮಹನೀಯ, ಕೆ.ವಿರೂಪಾಕ್ಷಪ್ಪ ಹೇಳಿಕೆ

    ಸಿಂಧನೂರು: ಭಕ್ತ ಕನಕದಾಸ ಅವರದ್ದು ಆಕರ್ಷಕ ವ್ಯಕ್ತಿತ್ವವಾಗಿದ್ದು, ಅವರ ವಿಚಾರಧಾರೆಗಳು ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಹೇಳಿದರು.

    ನಗರದ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಕನಕದಾಸ ಮತ್ತು ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನಕದಾಸ ಸಾಧು, ಸಂತ, ಶರಣ, ಸಾಹಿತಿ, ಕವಿ, ಸಂಶೋಧಕ, ವಿಜ್ಞಾನಿ, ಅರ್ಥಶಾಸ್ತ್ರಜ್ಞ ಎಲ್ಲವೂ ಆಗಿದ್ದರು. ಎಲ್ಲವನ್ನು ತೊರೆದು ಸಮಾಜದ ಬದಲಾವಣೆಗೆ ಶ್ರಮಿಸಿದ ಮಹಾನಾಯಕ ಆಗಿದ್ದರು. ಅಂದಿನ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಒಂಟಿಯಾಗಿ ಸಾಹಿತ್ಯ, ವಿಚಾರಧಾರೆಗಳ ಮೂಲಕ ಹೋರಾಡಿದರು ಎಂದರು.

    ಶಾಸಕ ವೆಂಕಟರಾವ ನಾಡಗೌಡ ಮಾತನಾಡಿ, ದಾಸ ಸಾಹಿತ್ಯದಲ್ಲಿ ಕನಕದಾಸ ಮತ್ತು ಪುರಂದರದಾಸ ಹೆಸರು ಪ್ರಮುಖವಾಗಿವೆ. ಬದುಕಿನ ಅಂಕು ಡೊಂಕುಗಳನ್ನು ಕನಕದಾಸರು ಎತ್ತಿ ತೋರಿಸಿದ್ದಾರೆ. ಆ ಕಾಲದಲ್ಲಿಯೇ ಸಮಾನತೆಯ ಸಮಾಜದ ನಿರ್ಮಾಣಕ್ಕೆ ಪ್ರಯತ್ನಿಸಿದ್ದರು. 800 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿದ್ದರು. ಇಂತಹ ಮಹಾನ್ ವ್ಯಕ್ತಿಗಳ ಜಯಂತಿ ಮಾಡಿದರೆ ಸಾಲದು, ಅವರ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡಾಗ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts