More

    ಉನ್ನತ ಶಿಕ್ಷಣದಿಂದ ಅಭಿವೃದ್ಧಿ ಸಾಧ್ಯ

    ಸಿಂಧನೂರು:  ಮಹಿಳೆಯರು ಧನಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ಸಾಧನೆಯತ್ತ ಹೆಜ್ಜೆ ಇಡಬೇಕೆಂದು ಡಾ.ಸೌಮ್ಯಾ ಪಾಟೀಲ್ ಹೇಳಿದರು.

    ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘ ಮತ್ತು ತಾಲೂಕು ಜಂಗಮ ಮಹಿಳಾ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು. ಮಹಿಳೆಯರು ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಉನ್ನತ ಶಿಕ್ಷಣ ಪಡೆದಷ್ಟು ಅಭಿವೃದ್ಧಿ ಸಾಧಿಸಬಹುದು. ದೌರ್ಜನ್ಯ, ಅವಮಾನಗಳನ್ನು ಮೆಟ್ಟಿ ನಿಲ್ಲುವ ವ್ಯಕ್ತಿತ್ವ ರೂಢಿಸಿಕೊಳ್ಳಬೇಕು. ಅಂದಾಗ ಮಹಿಳೆಯರು ಹೆಚ್ಚಿನ ಸಾಧನೆ ಮಾಡಬಹುದಾಗಿದೆ ಎಂದರು.

    ತಾಲೂಕು ಜಂಗಮ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಹಿರೇಮಠ ಮಾತನಾಡಿ, ಹೆಣ್ಣು ಅಬಲೆಯಲ್ಲ, ಸಬಲೆ ಎನ್ನುವುದನ್ನು ನಿರೂಪಿಸಬೇಕು ಎಂದರು. ಕಾರಟಗಿ ಪುರಸಭೆ ಸದಸ್ಯೆ ಅರುಣಾದೇವಿ ಮಾತನಾಡಿ, ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳನ್ನೂ ಪ್ರವೇಶಿಸುತ್ತಿದ್ದಾರೆ. ಮಹಿಳೆಯರು ಮನಸು ಮಾಡಿದರೆ ಏನನ್ನಾದರೂ ಸುಲಭವಾಗಿ ಸಾಧಿಸಬಹುದು ಎಂದು ತಿಳಿಸಿದರು.

    ವಕೀಲೆ ಹೇಮಲತಾ ಜೋಳದರಾಶಿ ಮಾತನಾಡಿ, ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಎದುರಿಸಲು ಅನೇಕ ಕಾನೂನುಳಿದ್ದು, ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು. ಮಹಿಳೆಯರು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಯಾವ ರೀತಿ ಸಂರಕ್ಷಣೆ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಡಾ.ಶ್ವೇತಾಂಬರಿ ವಿವರಿಸಿದರು. ಶೋಭಾ ದೇವಿ ವಸ್ತ್ರದ, ಜ್ಯೋತಿ ಸ್ವಾಮಿ ಇದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts