More

    ರಾಯಚೂರಿನಲ್ಲೇ ಏಮ್ಸ್ ಆರಂಭಿಸಿ

    ಸಿಂಧನೂರು: ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ರಾಯಚೂರಿನಲ್ಲೇ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿಯಿಂದ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

    ಕಲ್ಯಾಣ ಕರ್ನಾಟಕ ಪ್ರದೇಶ, ಅದರಲ್ಲೂ ರಾಯಚೂರು ಜಿಲ್ಲೆ ಬಹಳಷ್ಟು ಹಿಂದುಳಿದಿದೆ. ಇದಕ್ಕೆಲ್ಲಾ ನಮ್ಮ ಜಿಲ್ಲೆಯ ರಾಜಕೀಯ ಇಚ್ಛಾಶಕ್ತಿಯ ಕೊರತೆ ಕಾರಣ. ಈ ಹಿನ್ನೆಲೆಯಲ್ಲಿಯೇ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಡಾ.ಡಿ.ಎಂ. ನಂಜುಂಡಪ್ಪ ವರದಿಯಂತೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂಬ ಮಹತ್ವದ ಶಿಫಾರಸು ಮಾಡಲಾಗಿತ್ತು. ಅಂದಿನ ಸರ್ಕಾರದ ವಿಳಂಬ ನೀತಿ ಖಂಡಿಸಿ ಸಮಿತಿ ನಡೆಸಿದ ಹೋರಾಟದ ಫಲವಾಗಿ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂದಿನ ಸಿಎಂ ಜಗದೀಶ್ ಶೆಟ್ಟರ್ ಐಐಟಿ ಸ್ಥಾಪಿಸುವಂತೆ ಕೇಂದ್ರಕ್ಕೆ ಶಿಫಾರಸು ಕಳುಹಿಸುವ ನಿರ್ಣಯ ತೆಗೆದುಕೊಂಡು, ಕಳುಹಿಸುತ್ತು. ನಂತರ ಬಂದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಯಚೂರು ಹೆಸರು ಸೇರಿದಂತೆ ಧಾರವಾಡ ಮತ್ತು ಮೈಸೂರನ್ನೂ ಶಿಫಾರಸು ಮಾಡುವ ಮೂಲಕ ಜಿಲ್ಲೆಗೆ ದ್ರೋಹ ಬಗೆದಿದ್ದಾರೆ. ಈ ಕೂಡಲೇ ಉದ್ದೇಶಿತ ಏಮ್ಸ್ ಅನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಸ್ಥಾಪಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಏಕೈಕ ರಾಯಚೂರು ಹೆಸರನ್ನು ಮಾತ್ರ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

    ಸಮಿತಿ ಸಂಚಾಲಕ ಡಿ.ಎಚ್.ಕಂಬಳಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಸದಸ್ಯರಾದ ಕೆ.ಜಿಲಾನಿಪಾಷಾ, ಶರಣಪ್ಪ ಉಪ್ಪಲದೊಡ್ಡಿ, ಆಲಂಸಾಬ, ಮುಖಂಡರಾದ ಬಾಷುಮಿಯಾ, ಖಾದರ್‌ಸುಭಾನಿ, ಸಿಪಿಐಎಂಎಲ್ ರೆಡ್‌ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ್ ಇತರರಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts