More

    ಸಮಾಜದ ಕಟ್ಟ ಕಡೆ ವ್ಯಕ್ತಿಗೂ ತಲುಪಲಿ ಸರ್ಕಾರಿ ಸೇವೆ

    ಸಿಂಧನೂರು: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಿ ಮನೆ-ಮನೆಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಹೇಳಿದರು.

    ತಾಲೂಕಿನ ಹುಡಾ ಹೋಬಳಿಯ ಗೊಬ್ಬರಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿವಿಧ ಇಲಾಖೆಗಳ ಸೇವೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು ಎನ್ನುವದು ಸರಕಾರದ ಉದ್ದೇಶವಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು. ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು. ಹಲೋ ಕಂದಾಯ ಸಚಿವರೇ ಎನ್ನುವ ಯೋಜನೆಯಡಿ 72 ಗಂಟೆಯಲ್ಲಿ ವೃದ್ಧಾಪ್ಯ ವೇತನದ ಪ್ರಮಾಣಪತ್ರ ಅರ್ಹ ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸಲಾಗುವುದು.

    ಶೀಘ್ರವೇ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸಬೇಕು ಎಂದರು.

    ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ ಗುರಿಕಾರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಪಂಚಾಯತ್ ರಾಜ್ಯ ವ್ಯವಸ್ಥೆಯ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಇನ್ನೂ ಇಲಾಖೆಯನ್ನು ಕಾಗದ ರಹಿತ ಇಲಾಖೆಯನ್ನಾಗಿ ಮಾಡಲಾಗುವುದು ಎಂದರು.
    ಸೋಮಲಾಪುರ ಗ್ರಾಪಂ ಉಪಾಧ್ಯಕ್ಷೆ ನಾಗಮ್ಮ, ಸದಸ್ಯೆ ಲಕ್ಷ್ಮೀ, ಹುಲಿಗೆಮ್ಮ, ಅಂಬಾದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜಶೇಖರ ಹಿರೇಮಠ, ಸಿಡಿಪಿಒ ಲಿಂಗನಗೌಡ, ಜಿಪಂ ಉಪವಿಭಾಗದ ಎಇಇ ಅನ್ನಪೂರ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

    ಮನವಿ ಸಲ್ಲಿಕೆ : ಕುಡಿವ ನೀರು, ಬಸ್ ವ್ಯವಸ್ಥೆ, ಶಾಲಾ ಸಮತಟ್ಟುಗೊಳಿಸುವುದು. ವಿದ್ಯುತ್ ಸಂಪರ್ಕ ಕಲ್ಪಿಸುವುದು ಸೇರಿ ಗ್ರಾಮದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಗ್ರಾಮಸ್ಥರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

    ಫೋಟೊ19ಎಸ್‌ಎನ್‌ಡಿ-01
    ಸಿಂಧನೂರು ತಾಲೂಕಿನ ಹುಡಾ ಹೋಬಳಿಯ ಗೊಬ್ಬರಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಶನಿವಾರ ತಹಸೀಲ್ದಾರ್ ಅರುಣ್ ದೇಸಾಯಿ ಉದ್ಘಾಟಿಸಿದರು. ಸೋಮಲಾಪುರ ಗ್ರಾಪಂ ಉಪಾಧ್ಯಕ್ಷೆ ನಾಗಮ್ಮ, ಸದಸ್ಯೆ ಲಕ್ಷ್ಮೀ, ಹುಲಿಗೆಮ್ಮ, ಅಂಬಾದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜಶೇಖರ ಹಿರೇಮಠ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts