More

    ತುಳಿತಕ್ಕೊಳಗಾದ ಸಮುದಾಯದ ಏಳಿಗೆಗೆ ಆದ್ಯತೆ

    ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿಕೆ | ಪ್ರತಿಭಾ ಪುರಸ್ಕಾರ ಸಮಾರಂಭ

    ಸಿಂಧನೂರು: ತುಳಿತಕ್ಕೊಳಗಾದ ಸಮುದಾಯದ ಏಳಿಗೆಗೆ ಸರ್ಕಾರ ಸದಾ ಬದ್ಧವಿದ್ದು, ಸಮುದಾಯದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಿ, ವಸತಿ ನಿಲಯಗಳನ್ನು ತೆರೆದು ಅನುಕೂಲ ಮಾಡಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.

    ನಗರದ ಸತ್ಯಗಾರ್ಡನ್‌ನಲ್ಲಿ ಭಾನುವಾರ ತಾಲೂಕು ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಾದಿಗ ಸಮುದಾಯ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಮತ್ತು ಡಿಸಿಎಂ ಗೋವಿಂದ ಕಾರಜೋಳಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

    ಅಭಿನಂದನೆ ಸ್ವೀಕರಿಸಿ ಡಿಸಿಎಂ ಕಾರಜೋಳ ಮಾತನಾಡಿ, ಬಿಜೆಪಿಯಿಂದ ಮಾತ್ರ ಸಾಮಾಜಿಕ ನ್ಯಾಯ ಸಿಗಲು ಸಾಧ್ಯ. ನನಗೆ ನೀಡಿದ ಉಪಮುಖ್ಯಮಂತ್ರಿ ಹುದ್ದೆಯೇ ಸಾಕ್ಷಿಯಾಗಿದೆ. 70 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಸಮುದಾಯವನ್ನು ಕಡೆಗಣಿಸಿ, ವೋಟ್ ಬ್ಯಾಂಕ್ ಮಾಡಿಕೊಂಡಿದೆ. ಸ್ಥಿತಿಗತಿ ಸುಧಾರಿಸಲು ಯಾವ ಪ್ರಯತ್ನ ನಡೆದಿಲ್ಲ ಎಂದು ಆರೋಪಿಸಿದರು.

    ಸೆ.16 ರಂದು ಕೋರ್ ಕಮಿಟಿ ಸಭೆ ನಡೆಸಿ ಪರಿಶಿಷ್ಟ ಸಮುದಾಯ ಅಭಿವೃದ್ಧಿಗೆ 30 ಸಾವಿರ ಕೋಟಿ ರೂ. ಕಾರ್ಯಕ್ರಮ ಕೊಡಲು ರೂರುರೇಷ ಹಾಕಿಕೊಳ್ಳಲಾಗಿದೆ. ಭೂಮಿ ಖರೀದಿಸುವ ಹಕ್ಕು ನೀಡಿ, ಬಲ ಹೆಚ್ಚಿಸಲು ಚಿಂತಿಸಲಾಗಿದೆ. ಮಾದಿಗರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದರು.

    ಶಾಸಕ ವೆಂಕಟರಾವ್ ನಾಡಗೌಡ, ಕನಕಗಿರಿ ಶಾಸಕ ಬಸವರಾಜ ದಢೇಸುಗೂರು, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ನೌಕರರ ಸಂಘದ ಅಧ್ಯಕ್ಷ ಈಶ್ವರ ಮಾತನಾಡಿದರು. ಹಲಗಿಹಿರಿಯೂರ ಷಡಕ್ಷರಿ ಮುನಿ ದೇಶಿಕೇಂದ್ರಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪ್ರಗತಿಪರ ಚಿಂತಕ ಪ್ರೊ.ಸಿ.ಕೆ.ಮಹೇಶ, ಕೃಷಿ ಬೆಲೆ ಆಯೋಗ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಕಾಡಾ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ಜಿಪಂ ಸದಸ್ಯರಾದ ಅಮರೇಗೌಡ ವಿರೂಪಾಪುರ, ಎನ್.ಶಿವನಗೌಡ ಗೊರೇಬಾಳ, ಮಸ್ಕಿ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಎಚ್.ಎನ್.ಬಡಿಗೇರ, ಬಿಜೆಪಿ ಮುಖಂಡ ಕೊಲ್ಲಾ ಶೇಷಗಿರಿರಾವ್, ಶೇಖರಪ್ಪ ಗಿಣಿವಾರ, ಆರ್.ಅಂಬ್ರೂಸ್, ಎಂ.ಭಾಸ್ಕರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts