More

    ಹಿಜಾಬ್ ಕುರಿತು ನ್ಯಾಯಾಲಯ ತೀರ್ಪು ಪಾಲಿಸಿ- ತಹಸೀಲ್ದಾರ್ ಮಂಜುನಾಥ ಭೋಗಾವತಿ ಸೂಚನೆ

    ಸಿಂಧನೂರು: ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ಮಂಜುನಾಥ ಭೋಗಾವತಿ ಹೇಳಿದರು.

    ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನಲ್ಲಿರುವ ಆರ್‌ಎಂಎಸ್ ಶಾಲೆಯಲ್ಲಿ ಶುಕ್ರವಾರ ಸಂಜೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದರು. ಮಾ.28 ರಿಂದ ಏ.11 ವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳಿಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪರೀಕ್ಷೆ ನಡೆಸಬೇಕು. ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿದ್ದು, ಹಿಜಾಬ್‌ಗೆ ಸಂಬಂಧಿಸಿದಂತೆ ಕೋರ್ಟ್ ತೀರ್ಪು ಪಾಲಿಸಬೇಕೆಂದು ಸೂಚಿಸಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್ ಮಾತನಾಡಿ, ತಾಲೂಕಿನಲ್ಲಿ 5,846 ವಿದ್ಯಾರ್ಥಿಗಳಿದ್ದು 2860 ಬಾಲಕ ಹಾಗೂ 2986 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. 19 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ನಗರದಲ್ಲಿ 5 ಹಾಗೂ ಗ್ರಾಮೀಣ ಪ್ರದೇಶದಲ್ಲಿ 14 ಪರೀಕ್ಷಾ ಕೇಂದ್ರಗಳಿವೆ. ಬೆಳಗ್ಗೆ 8ಕ್ಕೆ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಅಯ್ಯನಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ, ತಾಪಂ ಇಒ ಲಕ್ಷ್ಮೀದೇವಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts