More

    ಒಂದೇ ದಿನ 11 ಸಾವಿರ ಪ್ರಕರಣ ಇತ್ಯರ್ಥ

    ಬೆಳಗಾವಿ: ಜಿಲ್ಲಾ ನ್ಯಾಯಾಲಯ ಸಂಕೀರ್ಣದ ನೂತನ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ 11,204 ಪ್ರಕರಣ ಇತ್ಯರ್ಥಗೊಂಡು, 110.62 ಕೋಟಿಗೂ ಅಧಿಕ ಮೊತ್ತ ಪರಿಹಾರದ ಆದೇಶ ನೀಡಲಾಗಿದೆ.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಬೆಳಗ್ಗೆ 11ಕ್ಕೆ ಆರಂಭವಾದ ಲೋಕ ಅದಾಲತ್‌ನಲ್ಲಿ ನ್ಯಾಯಿಕ ಸಂಧಾನಕಾರರಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಸಿ.ಎಂ. ಜೋಶಿ ಮತ್ತು ಮಹಾನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್ ಅವರು ಕಕ್ಷಿದಾರರ ಜತೆ ಆನ್‌ಲೈನ್ ಮೂಲಕ ಸಮಾಲೋಚನೆ ನಡೆಸಿದರು. ಪರಸ್ಪರ ಒಪ್ಪಿಗೆ ಮೇರೆಗೆ ಪ್ರಕರಣಗಳನ್ನು ಸಂಧಾನ ಮಾಡಿದರು.

    ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ವಿವಿಧ ರೀತಿಯ ಒಟ್ಟು 32,354 ಪ್ರಕರಣ ಕೈಗೆತ್ತಿಕೊಂಡು, ಅವುಗಳ ಪೈಕಿ 11,204 ಪ್ರಕರಣ ಇತ್ಯರ್ಥ ಪಡಿಸಿ 110.62 ಕೋಟಿ ರೂ. ಪರಿಹಾರ ಹಾಗೂ 37,263 ವ್ಯಾಜ್ಯ ಪೂರ್ವ ಪ್ರಕರಣಗಳ ವಿಚಾರಣೆ ನಡೆಸಲಾಯಿತು.

    12,133 ಪ್ರಕರಣ ರಾಜಿ-ಸಂಧಾನ ಮಾಡಿಸಿ ವಿವಿಧ ಸೊಸೈಟಿಗಳು, ಸಂಘ-ಸಂಸ್ಥೆಗಳು, ರಾಷ್ಟ್ರೀಕೃತ ಬ್ಯಾಂಕ್‌ಗಳು ಸೇರಿ ಸಂಧಾನಕ್ಕೆ ಒಪ್ಪಿದ ಕಕ್ಷಿದಾರರಿಗೆ 76.89 ಕೋಟಿ ರೂ.ಪರಿಹಾರದ ಆದೇಶ ನೀಡಲಾಯಿತು.

    ಮಧ್ಯಾಹ್ನ 12ರಿಂದ ಆರಂಭಗೊಂಡ ಅದಾಲತ್‌ನಲ್ಲಿ ನ್ಯಾಯಿಕ ಸಂಧಾನಕಾರರಾಗಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಇದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ವಿಜಯ ದೇವರಾಜ ಅರಸ್ ಸೇರಿ ಸರ್ಕಾರಿ ಅಭಿಯೋಜಕರು ಹಾಗೂ ವಕೀಲರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts