20.3 C
Bangalore
Sunday, December 15, 2019

ಬೆಳಗಾವಿ: ಮುಳುಗಡೆ ನಿರಾಶ್ರಿತರಿಗಿಲ್ಲ ಶಾಶ್ವತ ಪರಿಹಾರ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

|ಮಂಜುನಾಥ ಕೋಳಿಗುಡ್ಡ ಬೆಳಗಾವಿ

ಕೃಷ್ಣಾ ನದಿಪಾತ್ರದ ಮುಳುಗಡೆ ಗ್ರಾಮಗಳ ನಿರಾಶ್ರಿತರಿಗೆ 15 ವರ್ಷ ಕಳೆದರೂ ಶಾಶ್ವತ ಸೂರು ಸಿಗುತ್ತಿಲ್ಲ. ನೂರಾರು ಕೋಟಿ ರೂ. ಅನುದಾನ ಕಂಡವರ ಪಾಲಾಗುತ್ತಿದೆ.

ಪ್ರತಿವರ್ಷ ಮಹಾರಾಷ್ಟ್ರದ ಕೊಯ್ನ ಡ್ಯಾಂನಿಂದ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಬಿಡುತ್ತಿರುವ ಕಾರಣ ಜಿಲ್ಲೆಯಲ್ಲಿ ನದಿ ತೀರದ ಗ್ರಾಮಗಳು ಜಲಾವೃತಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಮುಳುಗಡೆ ಗ್ರಾಮಗಳ ಜನರಿಗೆ ವಾಸಿಸಲು ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ 2005ರಲ್ಲಿ ಯೋಜನೆ ಜಾರಿಗೆ ತಂದಿದೆ. ಆದರೆ, ಇಲ್ಲಿಯವರೆಗೆ ನಿರಾಶ್ರಿತರಿಗೆ ಹಕ್ಕುಪತ್ರ ವಿತರಣೆ ಮಾಡಿಲ್ಲ. ಜತೆಗೆ, ಯಾವುದೇ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ. ಅಥಣಿ ತಾಲೂಕಿನಲ್ಲಿ ಈ ಸಮಸ್ಯೆ ಸರ್ವೆಸಾಮಾನ್ಯ ಎಂಬಂತಾಗಿದೆ.

ಕೃಷ್ಣಾ ನದಿಪಾತ್ರದಲ್ಲಿರುವ ಅಥಣಿ ತಾಲೂಕಿನ ಪಿ.ಕೆ.ನಾಗನೂರ, ಅವರಖೋಡ, ರಡ್ಡೇರಹಟ್ಟಿ ಸೇರಿ 20ಕ್ಕಿಂತ ಅಕ ಮುಳುಗಡೆ ಗ್ರಾಮಗಳಿಗೆ ವಾಸಿಸಲು ಶಾಶ್ವತ ಪರಿಹಾರಕ್ಕಾಗಿ ಅವರಖೋಡ ಪ್ರದೇಶದ 80 ಎಕರೆ ಪ್ರದೇಶದಲ್ಲಿ ನಿವೇಶನ ಸಿದ್ಧಪಡಿಸಲಾಗಿದೆ. ಆದರೆ, 13 ವರ್ಷ ಕಳೆದರೂ ಅವುಗಳನ್ನು ಹಂಚಿಕೆ ಮಾಡಿಲ್ಲ. ಜತೆಗೆ ಯಾವುದೇ ಹಕ್ಕುಪತ್ರ ವಿತರಣೆ ಮಾಡಿಲ್ಲ ಎಂದು ಮುಳುಗಡೆ ಪ್ರದೇಶದ ನಿರಾಶ್ರಿತರು ದೂರುತ್ತಿದ್ದಾರೆ.
ನಾವು ಕೃಷ್ಣಾನದಿ ಸುತ್ತಲಿನ ತಗ್ಗು ಪ್ರದೇಶಗಳಲ್ಲಿ ಮನೆ ನಿರ್ಮಿಸಿಕೊಂಡಿದ್ದು, ಪ್ರತಿವರ್ಷ ಪ್ರವಾಹ ಎದುರಿಸುತ್ತಿದ್ದೇವೆ. ಪ್ರವಾಹ ಬಂದಾಗ ಅಕಾರಿಗಳು ಬಂದು ಗಂಜಿ ಕೇಂದ್ರ ತೆರೆಯುತ್ತಿದ್ದಾರೆ. ಆದರೆ, ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುತ್ತಿಲ್ಲ ಎಂಬುದು ನಿರಾಶ್ರಿತರ ಅಳಲು.

ಜವಾಬ್ದಾರಿ ಯಾರು?

2005ರಲ್ಲಿ ಕೃಷ್ಣೆಯಲ್ಲಿ ಪ್ರವಾಹ ಬಂದಾಗ ಚಿಕ್ಕೋಡಿ, ರಾಯಬಾಗ ಮತ್ತು ಅಥಣಿ ತಾಲೂಕು ವ್ಯಾಪ್ತಿಯಲ್ಲಿ 130 ಕೋಟಿ ರೂ. ಹಾನಿಯಾಗಿತ್ತು. ಆಗಿನ ಪರಿಹಾರ ಮೊತ್ತವನ್ನೇ ಸರಿಯಾಗಿ ಹಂಚಿಕೆ ಮಾಡಿಲ್ಲ. ಈಗ ಅದಕ್ಕಿಂತ ಹೆಚ್ಚಿನ ಹಾನಿಯಾಗಿದೆ. ಈ ಬಾರಿಯೂ ಪರಿಹಾರ ಹಂಚಿಕೆ ಸರಿಯಾಗಿ ನಡೆಯದಿದ್ದರೆ ಯಾರು ಜವಾಬ್ದಾರಿ ಎಂದು ನಿರಾಶ್ರಿತರು ಪ್ರಶ್ನಿಸುತ್ತಾರೆ.

ಸರ್ಕಾರದಿಂದ ನೂರಾರು ಕೋಟಿ ರೂ. ವೆಚ್ಚ

2006ರಿಂದ 2019ರ ಅವಯಲ್ಲಿ ಕೊಯ್ನ ಜಲಾಶಯದಿಂದ ಬಿಟ್ಟ ಹೆಚ್ಚುವರಿ ನೀರು ಮತ್ತು ಮಳೆಯ ಅವಾಂತರದಿಂದ ಕೃಷ್ಣಾನದಿ ತೀರದ ಕೆಲ ಗ್ರಾಮಗಳು ಜಲಾವೃತಗೊಂಡಿದ್ದು, ತೋಟದ ಮನೆಗಳು ನಡುಗಡ್ಡೆಗಳಾಗಿವೆ. ಸರ್ಕಾರವು ನಿರಾಶ್ರಿತರ ಹೆಸರಿನಲ್ಲಿ ನೂರಾರು ಕೋಟಿ ರೂ. ವೆಚ್ಚ ಮಾಡಿದೆ. ಆದರೆ, ಪರಿಹಾರ ಮಾತ್ರ ಸಿಕ್ಕಿಲ್ಲ. ಅಕಾರಿಗಳು ದುಂದು ವೆಚ್ಚ ಮಾಡುತ್ತಿದ್ದಾರೆ ಎಂದು ತಾಪಂ, ಗ್ರಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

2005ರ ಕೃಷ್ಣಾ ನದಿ ಪ್ರವಾಹ ಸಂದರ್ಭದಲ್ಲಿ ಸರ್ಕಾರದ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿದೆ. ಆದರೆ, ಇಲ್ಲಿಯವರೆಗೆ ಶಾಶ್ವತ ಪರಿಹಾರ ನೀಡಿಲ್ಲ. ಕೇವಲ ಭರವಸೆ ನೀಡುತ್ತಿದ್ದಾರೆ.
|ಸುವರ್ಣ ಕಾಂಬಳೆ, ವಿಠಲ ಮಾದರ, ಮುಳುಗಡೆ ನಿರಾಶ್ರಿತರು


ಆ.15ರ ಬಳಿಕ ಶಾಶ್ವತ ಪರಿಹಾರ

ಗ್ರಾಮದ ಜನವಸತಿ ಪ್ರದೇಶದಲ್ಲಿ ಕೃಷ್ಣಾ ನದಿ ನೀರು ನುಗ್ಗಿದ್ದರಿಂದ ಅಲ್ಲಿಯ 188 ಕುಟುಂಬಗಳನ್ನು ತಾಲೂಕಾಡಳಿತ ಸ್ಥಳಾಂತರ ಮಾಡಿದೆ. ಸ್ಥಳೀಯ ಸರ್ಕಾರಿ ಕನ್ನಡ ಶಾಲೆಯಲ್ಲಿ ಗಂಜಿ ಕೇಂದ್ರ ತೆರೆದು ಊಟೋಪಚಾರ ಒದಗಿಸಲಾಗಿದೆ. ಆ.15ರ ಬಳಿಕ ನಿರಾಶ್ರಿತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗುವುದು. ತಕ್ಷಣ ಪರಿಹಾರ ನೀಡಲು ಕ್ರಮ ವಹಿಸಲಾಗುವುದು.
|ರಾಕೇಶ ಸಿಂಗ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ


ಕೃಷ್ಣಾ ನದಿಪಾತ್ರದ ಮುಳುಗಡೆ ಪ್ರದೇಶದ ನಿವಾಸಿಗಳಿಗೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದ ಬಳಿ 80 ಎಕರೆ ಪ್ರದೇಶದಲ್ಲಿ ಅವರಖೋಡ, ನಾಗನೂರ ಗ್ರಾಮಗಳ ನಿರಾಶ್ರಿತರಿಗೆ ನಿವೇಶನ ಸಿದ್ಧಪಡಿಸಲಾಗಿದೆ. ಆದರೆ, ಇಲ್ಲಿಯವರೆಗೆ ಹಕ್ಕುಪತ್ರ ನೀಡಿಲ್ಲ. ಅಕಾರಿಗಳು 15 ವರ್ಷಗಳಿಂದ ಜನರ ದಾರಿ ತಪ್ಪಿಸುತ್ತಿದ್ದಾರೆ.
|ಬಾಬುರಾಮು ಉಲ್ಲಾಳ ಅಥಣಿ ತಾಪಂ ಸದಸ್ಯ

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...