More

    ಸಮರ್ಥವಾಗಿ ಮೂರನೇ ಅಲೆ ಎದುರಿಸಲು ಸಿದ್ಧ

    ಸಿರಗುಪ್ಪ: ತಾಲೂಕಿನಲ್ಲಿ 30 ಜನರಿಗೆ ಕರೊನಾ ಸೋಂಕು ದೃಢವಾಗಿದ್ದು, 23 ಜನ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕಿನ 7 ಜನ ವಿವಿಧ ರಾಜ್ಯಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಕರೊನಾ ತಾಲೂಕು ನೋಡಲ್ ಅಧಿಕಾರಿ ಡಾ.ವಿದ್ಯಾಶ್ರೀ ತಿಳಿಸಿದ್ದಾರೆ.

    ತಾಲೂಕು ಕಚೇರಿಯಲ್ಲಿ ಕೋವಿಡ್ ಮುಂಜಾಗ್ರತೆ ಕುರಿತು ಗುರುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ವೈದ್ಯ, ಲ್ಯಾಬ್‌ಟೆಕ್ನಿಷಿಯನ್, ನರ್ಸ್, ಗರ್ಭಿಣಿ, ಸಾರ್ವಜನಿಕರು ಹಾಗೂ ವಿವಿಧ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಕರೋನಾ ಸೋಂಕು ತಗುಲಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರೂ ಆರೋಗ್ಯವಾಗಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ. ಕೋವಿಡ್‌ಗೆ ಸಂಬಂಧಿಸಿ ವೆಂಟಿಲೇಟರ್, ಔಷಧ, ಆಕ್ಸಿಜನ್, ಬೆಡ್ ಹಾಗೂ ಸಿಸಿಸಿ ಸೆಂಟರ್ ತೆರೆಯಲಾಗಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.

    ತಹಸೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ಮಾತನಾಡಿ, ಕರೊನಾ ಮೂರನೇ ಅಲೆಗೆ ಸಂಬಂಧಿಸಿ ಎಲ್ಲ ವ್ಯವಸ್ಥೆ ಮಾಡಲಾಗಿದ್ದರೂ ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಮುಂದೆ ಆಗಬಹುದಾದ ಅನಾಹುತ ತಡೆಯಬೇಕು. ಸಣ್ಣ ಕಾಯಿಲೆ ಕಾಣಿಸಿಕೊಂಡರೂ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನಂತರ ಸೂಕ್ತ ಮಾರ್ಗದರ್ಶನ ಪಡೆದು ಚಿಕಿತ್ಸೆ ಪಡೆಯಬೇಕೆಂದು ಹೇಳಿದರು. ಫಾರ್ಮಸಿಸ್ಟ್ ನರೇಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts