More

    ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡಿ, ಲೋಕಾಯುಕ್ತ ಸಿ.ಪಿ.ಐ. ಸಂಗಮೇಶ ಹೇಳಿಕೆ

    ಸಿರಗುಪ್ಪ: ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಭ್ರಷ್ಟಾಚಾರ ರಹಿತರಾಗಿ ಕೆಲಸ ಮಾಡಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು ಎಂದು ಲೋಕಾಯುಕ್ತ ಸಿ.ಪಿ.ಐ.ಸಂಗಮೇಶ ತಿಳಿಸಿದರು.

    ನಗರದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಲೋಕಾಯುಕ್ತ ಪೊಲೀಸ್ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದರು. ನಿಯಮ ಪಾಲನೆಯ ನೆಪದಲ್ಲಿ ಕಾಲ ಹರಣ ಮಾಡುವುದು ಸರಿಯಲ್ಲ. ಕೆಲವು ಸಂದರ್ಭದಲ್ಲಿ ನಿಯಮಗಳ ಪಾಲನೆಯೊಂದಿಗೆ ಮಾನವೀಯ ದೃಷ್ಟಿಯಿಂದಲೂ ಕೆಲಸ ಮಾಡಿಕೊಡಬೇಕು. ವಿವಿಧ ಕಚೇರಿಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು. ನಿಗದಿತ ಅವಧಿಯೊಳಗೆ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಎಲ್ಲ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಸಕಾಲ ಯೋಜನೆಯಲ್ಲಿ ನಿಗದಿಪಡಿಸಿದ ಕಾಲಮಿತಿಯೊಳಗೆ ಮಾಡಿಕೊಡಬೇಕು. ಇಲಾಖೆಗೆ ಸಂಬಂಧಿಸಿದ ವೈಯಕ್ತಿಕ ದೂರು ಬಂದರೆ ಅಂತಹ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕಾಗುವುದು ಎಂದು ಎಚ್ಚರಿಸಿದರು.

    ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮರಾ ಅಳವಡಿಸಬೇಕು. ಇದರಿಂದ ಅಪರಾಧದ ಬಗ್ಗೆ ಮತ್ತಿತರ ಮಾಹಿತಿಯನ್ನು ತಕ್ಷಣ ಪಡೆಯಲು ಸಾಧ್ಯ. ಈ ಬಗ್ಗೆ ಕಚೇರಿಗಳಿಗೆ ಬಂದು ಪರಿಶೀಲನೆ ಮಾಡಲಾಗುವುದ್ತು. ಕಚೇರಿಯಲ್ಲಿ ಸರ್ಕಾರಿ ಅಧಿಕಾರಿಗಳು ಇಲ್ಲದ ಸಮಯದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಯಾರೇ ಮೊಬೈಲ್ ಕರೆ ಮಾಡಿದರೂ ಕಡ್ಡಾಯವಾಗಿ ಕರೆ ಸ್ವೀಕರಿಸಿ, ಮಾಹಿತಿ ಪಡೆಯಬೇಕು. ಇಲ್ಲಿನ ಬಹುತೇಕ ಅಧಿಕಾರಿಗಳಿಗೆ ಸಾರ್ವಜನಿಕರು ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ ಎನ್ನುವ ದೂರುಗಳಿವೆ. ಇನ್ನು ಮುಂದೆ ದೂರು ಕೇಳಿ ಬರದಂತೆ ತಡೆಯಬೇಕು ಎಂದರು.

    ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹದ ಅಂಗವಾಗಿ ಅಧಿಕಾರಿಗಳಿಗೆ ಲೋಕಾಯುಕ್ತ ಸಿಪಿಐ ಪ್ರತಿಜ್ಞಾವಿಧಿ ಭೋಧಿಸಿದರು. ತಾಪಂ ಇಒ ಎಂ.ಬಸಪ್ಪ, ಪೌರಾಯುಕ್ತ ಪ್ರೇಮ್‌ಚಾರ್ಲ್ಸ್, ಸಿಡಿಪಿಒ ಜಲಾಲಪ್ಪ, ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿ ಮಹೇಶ್, ಬಿಸಿಎಂ ಅಧಿಕಾರಿ ಗಾದಿಲಿಂಗಪ್ಪ, ಬಿಇಒ ಪಿ.ಡಿ.ಭಜಂತ್ರಿಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts