More

    ಪ್ರತಿಯೊಬ್ಬರಿಗೂ ಸಿಗಲಿ ಸಮಾನತೆ

    ಸಿರಗುಪ್ಪ: ಪ್ರಪಂಚದ ಪ್ರತಿಯೊಬ್ಬ ಮನುಷ್ಯನಿಗೂ ಜೀವಿಸಲು ಸಮಾನ ನ್ಯಾಯ ಬೇಕು. ಈ ಸಾಮಾಜಿಕ ನ್ಯಾಯ ಪ್ರತಿಯೊಬ್ಬರಿಗೂ ದೊರಯಬೇಕೆನ್ನುವ ಉದ್ದೇಶದಿಂದ ವಿಶ್ವ ಸಂಸ್ಥೆಯಿಂದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಸಹಾಯಕ ಸರ್ಕಾರಿ ಅಭಿಯೋಜಕಿ ಬಿ.ಎಲ್.ಶಾರದಾ ಹೇಳಿದರು.

    ನಗರದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಸೋಮವಾರ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಮಾತನಾಡಿ, ಪ್ರತಿಯೊಂದೂ ದೇಶವೂ ತನ್ನದೇ ಆದ ಸಂವಿಧಾನದ ಮೂಲಕ ಎಲ್ಲರಿಗೂ ಸಾಮಾಜಿಕವಾಗಿ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಕೆಲ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿರುತ್ತದೆ ಎಂದರು.

    ನಮ್ಮ ಭಾರತದ ಸಂವಿಧಾನದಲ್ಲಿಯೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಮೂಲಕ ಬಡವ, ಶ್ರೀಮಂತ, ಮೇಲು-ಕೀಳು ಎನ್ನುವ ಭೇದ-ಭಾವ ಮಾಡದೆ ಪ್ರತಿಯೊಬ್ಬರಿಗೂ ಸಮಾನತೆ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟಿದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಎನ್.ಅಬ್ದುಲ್‌ಸಾಬ್, ಮಲ್ಲಿಗೌಡ ಮಾತನಾಡಿದರು. ಹಿರಿಯ ವಕೀಲರಾದ ವೆಂಕಟೇಶನಾಯ್ಕ, ಪಿ.ಮಹದೇವಪ್ಪ, ನೆಲಗುಂಟಯ್ಯ, ರಾಮಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts