More

    ಗ್ರಾಮ ವಾಸ್ತವ್ಯದಲ್ಲಿ ಸಮಸ್ಯೆ ಹೇಳಿ ಪರಿಹರಿಸಿಕೊಳ್ಳಲು ಸಲಹೆ ನೀಡಿದ ಶಾಸಕ ಎಂ.ಎಸ್. ಸೋಮಲಿಂಗಪ್ಪ

    ಸಿರಗುಪ್ಪ: ಗ್ರಾಮವಾಸ್ತವ್ಯ ದಿನದಂದು ನಿಮ್ಮೂರಿಗೆ ಬರುವ ಅಧಿಕಾರಿಗಳ ಬಳಿ ಸಮಸ್ಯೆ ಹೇಳಿಕೊಂಡು ಪರಿಹಾರ ಕಂಡುಕೊಳ್ಳುವಂತೆ ಶಾಸಕ ಎಂ.ಎಸ್. ಸೋಮಲಿಂಗಪ್ಪ ನಾಗರಿಕರಲ್ಲಿ ಮನವಿ ಮಾಡಿದರು.

    ತಾಲೂಕಿನ ಹೆರಕಲ್ ಗ್ರಾಮದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ, ಜಿಪಂ, ತಾಪಂ, ವಿವಿಧ ಇಲಾಖೆಗಳ ಆಶ್ರಯದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮದಲ್ಲಿರುವ ವೃದ್ಧರು, ಅಂಗವಿಕಲರು, ವಿಧವೆಯರು ತಮ್ಮ ವೇತನಕ್ಕಾಗಿ ಹಾಗೂ ಅವಿದ್ಯಾವಂತ ರೈತರು ಜಮೀನಿಗೆ ಸಂಬಂಧಿಸಿದ ಪೂರಕ ದಾಖಲೆಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳಿಂದ ಗ್ರಾಮವಾಸ್ತವ್ಯ ನಡೆಸಲಾಗುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    ಟಿ.ಎಚ್.ಒ. ಈರಣ್ಣ ಮಾತನಾಡಿ, ಏ.18ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ತಹಸೀಲ್ದಾರ್ ಎನ್.ಆರ್. ಮಂಜುನಾಥಸ್ವಾಮಿ ಮಾತನಾಡಿ, ಗ್ರಾಮಸ್ಥರಿಂದ ವಿವಿಧ ಇಲಾಖೆಗಳಿಗೆ 20 ಅರ್ಜಿಗಳು ಬಂದಿದ್ದು, ಕೆಲವನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗಿದ್ದು, ಉಳಿದವನ್ನು ಪರಿಶೀಲಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದರು.

    ಉಪ ತಹಸೀಲ್ದಾರ್ ವಾಣಿ, ತಾಪಂ ಇ.ಒ. ಮಡಗಿನ ಬಸಪ್ಪ, ಕೆಂಚನಗುಡ್ಡ ಗ್ರಾಪಂ ಅಧ್ಯಕ್ಷೆ ದುರುಗಮ್ಮ, ಉಪಾಧ್ಯಕ್ಷ ಹನುಮಂತಮ್ಮ, ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮದ್, ಜಿಪಂ ಅಭಿಯಂತರ ವೀರೇಶನಾಯಕ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ.ಸಿದ್ದಯ್ಯ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಗಾದಿಲಿಂಗಪ್ಪ, ಪಿಡಿಒ ಆದೆಪ್ಪ, ಕಂದಾಯ ಅಧಿಕಾರಿಗಳಾದ ಸಿದ್ಧಾರ್ಥ, ವೀರೇಂದ್ರ, ಸುದೀಂದ್ರ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts