More

    ನಿವೇಶನ ರಹಿತರಿಗೆ ಮನೆ ಸೌಲಭ್ಯ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿಕೆ

    ಸಿರಗುಪ್ಪ: ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಸೂರು ಒದಗಿಸುವುದು ನಮ್ಮ ಸರ್ಕಾರದ ಆಶಯವಾಗಿದ್ದು, ರಾಜ್ಯದಲ್ಲಿ ನಿವೇಶನ ರಹಿತರಿಗೆ ಮನೆಗಳನ್ನು ವಿವಿಧ ಯೋಜನೆಯಡಿ ಕಟ್ಟಿಸಿ ಕೊಡಲಾಗುತ್ತಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

    ತಾಲೂಕಿನ ತೆಕ್ಕಲಕೋಟೆಯಲ್ಲಿ ಬಳ್ಳಾರಿ ಜಿಲ್ಲಾಡಳಿತ ಮತ್ತು ವಸತಿ ಇಲಾಖೆ ಸೋಮವಾರ ಏರ್ಪಡಿಸಿದ್ದ ತೆಕ್ಕಲಕೋಟೆ ಪಪಂಗೆ 2021-22ನೇ ಸಾಲಿಗೆ ಮಂಜೂರಾದ 400 ಹೆಚ್ಚುವರಿ ಮನೆಗಳ ಫಲಾನುಭವಿಗಳಿಗೆ ಕಾಮಗಾರಿಯ ಆದೇಶ ಪ್ರತಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದಕ್ಕಾಗಿ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚಮಾಡುತ್ತಿದೆ ಎಂದರು.

    ನಮ್ಮ ಸರ್ಕಾರವು ವಿವಿಧ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 33ಸಾವಿರ ಕೋಟಿ ರೂ.ಅನುದಾನ ಕಾಯ್ದಿರಿಸಿದೆ. ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಈ ವರ್ಷ ಮಳೆಗಾಲದಲ್ಲಿ 200 ಟಿಎಂಸಿ ನೀರು ವ್ಯರ್ಥವಾಗಿ ಹರಿದು ಹೋಗಿದ್ದು, ನಮ್ಮ ಜಿಲ್ಲೆಗಳ ರೈತರ ಅನುಕೂಲಕ್ಕಾಗಿ ಗಂಗಾವತಿ ತಾಲೂಕಿನ ನವಲಿ ಸಮೀಪ ಸಮಾನಾಂತರ ಜಲಾಶಯವನ್ನು ನಿರ್ಮಿಸಲು ಈಗಾಗಲೇ ಸಮೀಕ್ಷೆ ಕಾರ್ಯ ನಡೆಸಲಾಗಿದೆ. ಸಮಾನಾಂತರ ಜಲಾಶಯ ನಿರ್ಮಾಣಕ್ಕೆ 1 ಸಾವಿರ ಕೋಟಿ ರೂ. ಅನುದಾನ ಮೀಸಲಿಡರಾಗಿದೆ. ನಮ್ಮ ಸರ್ಕಾರ ಅಧಿಕಾರಾವಧಿಯಲ್ಲಿ ಮಳೆ ಚೆನ್ನಾಗಿ ಆಗಿದೆ. ಎಲ್ಲ ಜಲಾಶಯಗಳು ತುಂಬಿವೆ. ರೈತರು ಬೆಳೆ ಬೆಳೆಯಲು ಅನುಕೂಲವಾಗಿದೆ. ಆದರೆ, ಬೇರೆ ಸರ್ಕಾರ ಅಧಿಕಾರಕ್ಕೆ ಬಂದಾಗ ಬರಗಾಲ ಬರುತ್ತಿತ್ತು. ಜಲಾಶಯಗಳು ತುಂಬದೆ ರೈತರು ಸಂಕಷ್ಟ ಅನುಭವಿಸುತ್ತಿದ್ದರು. ರಾಜ್ಯದಲ್ಲಿ 37 ಲಕ್ಷ ರೈತರಿಗೆ ಬಡ್ಡಿ ರಹಿತ ಸಾಲವನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಇಲ್ಲಿಯವರೆಗೆ 34 ಲಕ್ಷ ರೈತರಿಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗಿತ್ತು ಎಂದರು.

    ಶಾಸಕ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿ, ತಾಲೂಕಿನ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಈ ಬಾರಿ ತಾಲೂಕಿನ 27 ಗ್ರಾಪಂಳಿಗೆ ಮೂರು ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ತೆಕ್ಕಲಕೋಟೆಯಲ್ಲಿ 700ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲು ಮಂಜೂರಾತಿ ಆದೇಶ ಪತ್ರವನ್ನು ನೀಡಲಾಗಿದೆ. ರೈತಪರ, ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ವಿರೋಧ ಪಕ್ಷದವರು ನಮ್ಮ ಸರ್ಕಾರ ಕೆಲಸ ಮಾಡುತ್ತಿಲ್ಲವೆಂದು ವಿನಾಕಾರಣ ಆರೋಪ ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ, ವಿಪಕ್ಷದವರ ಆರೋಪದಲ್ಲಿ ಹುರುಳಿಲ್ಲ ಎಂದರು.

    ಕೊಪ್ಪಳ ಸಂಸದ ಕರಡಿ ಸಂಗಣ್ಣ ಮಾತನಾಡಿದರು. ಬಳ್ಳಾರಿ ಡಿಸಿ ಪವನ್‌ಕುಮಾರ್ ಮಾಲಪಾಟಿ, ಮಾಜಿ ಸಂಸದೆ ಜೆ.ಶಾಂತಾ, ಮುಖ್ಯಾಧಿಕಾರಿ ಈರಣ್ಣ, ಪಪಂ ಸದಸ್ಯರಾದ ಲಕ್ಷ್ಮೀ, ಎಂ.ಎಸ್.ರುದ್ರಮ್ಮ, ಸಿಂಗ್ರಿ ಸಿದ್ದಯ್ಯ, ಮುಖಂಡರಾದ ಮುರಾರಿ ಗೌಡ, ವಿರುಪಾಕ್ಷಿಗೌಡ, ಎಂ.ಕೋಟೆಶ್ವರರೆಡ್ಡಿ ಎಂ.ಎಸ್.ಸಿದ್ದಪ್ಪ, ಎಂ.ಎಸ್.ವೆಂಕಟಪ್ಪ ನಾಯಕ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts