More

    ಮೀನು ಸಾಕಣೆ ಆದಾಯ ದಾಯಕ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಪ್ರತಿಪಾದನೆ

    ಸಿರಗುಪ್ಪ: ಮೀನು ಒಂದು ಪೌಷ್ಟಿಕ ಆಹಾರವಾಗಿದ್ದು, ಇದರಿಂದ 19 ವಿವಿಧ ಆಹಾರ ಉತ್ಪಾದನೆಗಳನ್ನು ತಯಾರಿಸಬಹುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ವಿವರಿಸಿದರು.

    ಬಳ್ಳಾರಿ ಜಿಪಂ ಜಿಲ್ಲಾ ಮೀನುಗಾರಿಕೆ ಇಲಾಖೆಯಿಂದ ನಬಾರ್ಡ್ ಯೋಜನೆಯಡಿ 1 ಕೋಟಿ ರೂ.ವೆಚ್ಚದದಲ್ಲಿ ನಿರ್ಮಾಣವಾದ ಮೀನು ಮಾರುಕಟ್ಟೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಕಡಿಮೆ ಬಂಡವಾಳ, ಹೆಚ್ಚು ಲಾಭವನ್ನು ಮೀನು ಕೃಷಿಯಲ್ಲಿ ಪಡೆಯಬಹುದು. ಕಡಿಮೆ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಹೆಚ್ಚಿನ ಆದಾಯ ಪಡೆದುಕೊಳ್ಳಬಹುದು/ ಬಳ್ಳಾರಿ ಭಾಗದಲ್ಲಿ ಅತಿ ಹೆಚ್ಚು ಉಷ್ಣಾಂಶವಿದ್ದು, ಸಿರಗುಪ್ಪದಲ್ಲಿ ತುಂಗಭದ್ರಾ ನದಿಯ ಸಿಹಿ ನೀರನ್ನು ಬಳಸಿಕೊಂಡು ಭತ್ತಕ್ಕೆ ಪರ್ಯಾಯವಾಗಿ ಮೀನುಗಾರಿಕೆ ಕೃಷಿ ಮಾಡುವುದರಿಂದ ರೈತರು, ನಿರುದ್ಯೋಗಿಗಳು ಆರ್ಥಿಕವಾಗಿ ಸದೃಢವಾಗಬಹುದು ಎಂದರು.

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಭತ್ತದ ನಾಡೆಂದು ಪ್ರಸಿದ್ಧಿ ಪಡೆದಿರುವ ಸಿರಗುಪ್ಪದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆಯನ್ನು ಪ್ರಾರಂಭಿಸಲಾಗಿದೆ. ಕೃಷಿಹೊಂಡ, ಮೀನಿನ ಕೆರೆ, ಬಂಜರು ಭೂಮಿ, ಸವಳು ಭೂಮಿಯಲ್ಲಿ ಭತ್ತದ ಬೆಳೆಯೊಂದಿಗೆ ಮೀನುಗಾರಿಕೆಯ ಕೃಷಿಯನ್ನು ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಗಳಿಸಬಹುದು. ಇದರಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ನಮ್ಮ ದೇಶದಲ್ಲಿ ಜನಸಂಖ್ಯೆ ಮತ್ತು ನಿರುದ್ಯೋಗ ಬಹುದೊಡ್ಡ ಸಮಸ್ಯೆಗಳಾಗಿವೆ. ಇವುಗಳನ್ನು ಹೋಗಲಾಡಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಆತ್ಮ ನಿರ್ಭರ್ ಯೋಜನೆಯಡಿ ಅನೇಕ ಗುಂಪುಗಳನ್ನು ರಚಿಸಿ, ತರಬೇತಿ ನೀಡಿ ಉದ್ಯೋಗಗಳನ್ನು ಕೈಗೊಳ್ಳಲು ಆರ್ಥಿಕ ನೆರವು ನೀಡುತ್ತಿದೆ. ಇಂತಹ ಯೋಜನೆಗಳನ್ನು ಈ ಭಾಗದ ನಿರುದ್ಯೋಗಿ ಯುವಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದದರು.

    ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರು ಬಸವನಗೌಡ, ಜಿಲ್ಲಾ ಮೀನುಗಾರಿಕೆ ಸಹಾಯಕ ನಿರ್ದೇಶಕ ಶಿವಣ್ಣ, ತಹಸೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ನಗರಸಭೆ ಅಧ್ಯಕ್ಷ ಕೆ.ಸುಶೀಲಮ್ಮವೆಂಕಟರಾಮರೆಡ್ಡಿ, ಗ್ರಾ.ಪಂ. ಅಧ್ಯಕ್ಷೆ ಎಸ್.ಶೇಖಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts