More

    ನಮ್ಮ ಕ್ಲಿನಿಕ್ ಸೇವೆ ಸದ್ಬಳಕೆ ಮಾಡಿಕೊಳ್ಳಿ -ಶಾಸಕ ಎಂ.ಎಸ್.ಸೋಮಲಿಂಗಪ್ಪ ಸಲಹೆ

    ಸಿರಗುಪ್ಪ: ಸರ್ವರಿಗೂ ಉತ್ತಮ ಚಿಕಿತ್ಸೆ ಸೌಕರ್ಯ ಲಭ್ಯವಾಗುವಂತೆ ಮಾಡಲು ಬಿಜೆಪಿ ಸರ್ಕಾರ ನಮ್ಮ ಕ್ಲಿನಿಕ್ ಯೋಜನೆ ಜಾರಿಗೆ ತಂದಿದೆ ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು.
    ನಗರದ ಡ್ರೈವರ್ ಕಾಲನಿಯಲ್ಲಿ ಆರೋಗ್ಯ ಇಲಾಖೆಯಿಂದ ಸ್ಥಾಪಿಸಲಾದ ನಮ್ಮ ಕ್ಲಿನಿಕ್‌ಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

    ಈ ಯೋಜನೆ ದೇಶದಲ್ಲಿಯೇ ಮೊದಲಬಾರಿಗೆ ಕರ್ನಾಟಕದಲ್ಲಿ ಜಾರಿಗೆ ಬಂದಿದ್ದು, ಬಜೆಪಿ ಸರ್ಕಾರದ ಹೆಗ್ಗಳಿಕೆಯಾಗಿದೆ. ಪ್ರತಿಯೊಂದು ಕ್ಲಿನಿಕ್ 20ಸಾವಿರ ಮಂದಿಗೆ ಸೇವೆ ಒದಗಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇದರಿಂದ 2 ಮತ್ತು 3ನೇ ಹಂತದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಜನರು ಆರೋಗ್ಯ ತಪಾಸಣೆಗೆ ಜಿಲ್ಲಾ ಕೇಂದ್ರ ಅಥವಾ ತಾಲೂಕು ಕೇಂದ್ರಕ್ಕೆ ಹೋಗುವ ಅನಿವಾರ್ಯತೆ ತಪ್ಪುತ್ತದೆ.

    ನಮ್ಮ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಜತೆಗೆ ಪ್ರಯೋಗಾಲಯ ಸೇವೆ, ಔಷಧ ಉಚಿತವಾಗಿ ದೊರೆಯುತ್ತವೆ. 14 ಮಾದರಿಯ ಟೆಸ್ಟ್‌ಗಳನ್ನು ನಮ್ಮ ಕ್ಲಿನಿಕ್‌ನಲ್ಲಿ ಮಾಡಲಾಗುತ್ತದೆ. ಪ್ರತಿನಿತ್ಯ ಬೆಳಗ್ಗೆ 9-00 ರಿಂದ ಸಂಜೆ 4-30ರ ವರೆಗೆ ಕಾರ್ಯ ನಿರ್ವಹಿಸುತ್ತದೆ. ಭಾನುವಾರ ರಜೆ ಇರುತ್ತದೆ. ನಮ್ಮ ಕ್ಲಿನಿಕ್‌ನ ಸೇವೆಯನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

    ಡಿ.ಎಚ್.ಒ. ಡಾ.ಜನಾರ್ಧನ ಮಾತನಾಡಿ, ಜನವಸತಿಗಳಿಗೆ ಹತ್ತಿರದಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸುವುದರಿಂದ ಜನರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಸಿಗಲು ಸಾಧ್ಯವಾಗುತ್ತದೆ. ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts