More

    ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ; ಎಸ್ಪಿ ರಂಜಿತ್ ಭಂಡಾರು ಸೂಚನೆ

    ಸಿರಗುಪ್ಪದಲ್ಲಿ ಶಾಂತಿ ಸಭೆ ಆಯೋಜನೆ

    ಸಿರಗುಪ್ಪ: ಪಿಒಪಿ ಗಣೇಶ ಮೂರ್ತಿ ಮಾರಾಟ ನಿಷೇಧಿಸಿದ್ದು, ಯಾರೂ ಖರೀದಿಸಬಾರದು. ಪರಿಸರ ಸ್ನೇಹಿ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಎಸ್ಪಿ ರಂಜಿತ್ ಭಂಡಾರು ಹೇಳಿದರು.

    ನಗರದ ಪೊಲೀಸ್ ಠಾಣೆಯಲ್ಲಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತ ಬುಧವಾರ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು.

    ಗಣೇಶ ಮೂರ್ತಿ ವಿಸರ್ಜನೆಗೆ ಮಕ್ಕಳು ಹೋಗದಂತೆ ಪೋಷಕರು ಗಮನಹರಿಸಬೇಕು. ಮೂರ್ತಿ ವಿಸರ್ಜನೆಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು.

    ತ್ಯಾಜ್ಯವನ್ನು ನಿಗದಿಪಡಿಸಿದ ಸ್ಥಳದಲ್ಲಿ ಹಾಕಬೇಕು. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಅಬಕಾರಿ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ. ಬ್ಯಾನರ್‌ಗಳನ್ನು ನಿಗದಿತ ಸ್ಥಳಗಳಲ್ಲಿ ಮಾತ್ರ ಅನುಮತಿ ಪಡೆದು ಅಳವಡಿಸಬೇಕು ಎಂದರು.

    ಗಣೇಶ ಮೂರ್ತಿ ಕೂಡಿಸಿರುವ ಸ್ಥಳದಲ್ಲಿ ಡಿಜೆ ಬಳಸುವಂತಿಲ್ಲ. ಅಕ್ರಮ ಚಟುವಟಿಕೆಗಳು ನಡೆದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಕೆಇಬಿ, ಅಗ್ನಿಶಾಮಕ, ಪಪಂ, ನಗರಸಭೆ ಹಾಗೂ ಪೊಲೀಸ್ ಇಲಾಖೆಯಿಂದ ಮೂರ್ತಿ ಪ್ರತಿಷ್ಠಾಪನೆಗೆ ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು ಎಂದು ತಿಳಿಸಿದರು.

    ಪ್ರಭಾರ ಡಿವೈಎಸ್ಪಿ ಒಡೆಯರ್, ಸಿಪಿಐ ಸುಂದರೇಶ್, ತಹಸೀಲ್ದಾರ್ ಎಚ್ ವಿಶ್ವನಾಥ್, ಅಬಕಾರಿ ಸಿಪಿಐ ಕೀರ್ತನಾ, ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ, ಡಾ.ಮಹಮದ್ ಅಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts