More

    ಗುಣಮಟ್ಟದ ಕಾಮಗಾರಿ ಕೈಗೊಳ್ಳಿ- ಶಾಸಕ ಎಂ.ಎಸ್.ಸೋಮಲಿಂಗಪ್ಪ ಸೂಚನೆ

    ಸಿರಗುಪ್ಪ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಯೋಜನೆಯಡಿ 6.50 ಕೋಟಿ ರೂ. ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ನಗರದ ಗಾಂಧಿವೃತ್ತದಿಂದ 2.5 ಕಿ.ಮೀ ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    ರಸ್ತೆಯ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಆದಷ್ಟು ಶೀಘ್ರವಾಗಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿ ಮುಗಿಸಿಕೊಡುವಂತೆ ತಿಳಿಸಲಾಗಿದೆ. ನಿಟ್ಟೂರು ಮತ್ತು ಸಿಂಗಾಪುರ ನಡುವೆ ಸೇತುವೆ ನಿರ್ಮಾಣ ಮಾಡಲು ಬೇಕಾದ 110 ಕೋಟಿ ರೂ. ಅನುದಾನವನ್ನು ಜಿಲ್ಲಾ ಖನಿಜ ನಿಧಿ ಅಡಿಯಲ್ಲಿ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಲಾಗಿದೆ. ಸೇತುವೆ ನಿರ್ಮಾಣ ಸ್ಥಳದಲ್ಲಿ ಜಮೀನನ್ನು ವಶಪಡಿಸಿಕೊಳ್ಳಲು ಬೇಕಾದ ಅನುದಾನ ರೂ.13 ಕೋಟಿಯನ್ನು ಸರ್ಕಾರ ಮಂಜೂರು ಮಾಡಲಾಗಿದೆ.

    ಈ ಸೇತುವೆ ನಿರ್ಮಾಣವಾಗುವುದರಿಂದ ಹುಬ್ಬಳ್ಳಿಯಿಂದ ಕೊಪ್ಪಳ, ಗಂಗಾವತಿ, ಆದೋನಿ, ಪತ್ತಿಕೊಂಡ ಮೂಲಕ ಗುತ್ತಿಯವರೆಗೆ ಎನ್.ಹೆಚ್.7 ಹೆದ್ದಾರಿಯನ್ನು ಸಂಪರ್ಕಿಸಲು ಸಹಕಾರಿಯಾಗುತ್ತದೆ. ನಮ್ಮ ತಾಲೂಕಿನಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಲು ಈ ಸೇತುವೆ ನಿರ್ಮಾಣದಿಂದ ಅನುಕೂಲವಾಗಲಿದೆ. ಜನವರಿ ಕೊನೆ ವಾರದಲ್ಲಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಸಿರುಗುಪ್ಪ ಕುಡಿವ ನೀರಿನ ಕೆರೆ, ರಾರಾವಿ ಸೇತುವೆ ಲೋಕಾರ್ಪಣೆ ಮತ್ತು ಮುದೇನೂರು ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆಂದು ಎಂದರು.

    ನಗರಸಭೆ ಅಧ್ಯಕ್ಷೆ ಕೆ.ಸುಶೀಲಮ್ಮ, ಮುಖಂಡರಾದ ಎಂ.ಎಸ್.ಸಿದ್ದಪ್ಪ, ಎಂ.ಎಸ್.ವೆಂಕಟಪ್ಪ, ಡಿ. ಸೋಮಪ್ಪ, ಮಧುಸೂಧನಶೆಟ್ಟಿ, ವಿಶ್ವನಾಥಶೆಟ್ಟಿ, ಎಂ.ವೀರೇಶ, ಮಹಾದೇವ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts