More

    ಸಿರಗುಪ್ಪದಲ್ಲಿ ಮಳೆಗೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ, ಸೀಮಾಂಧ್ರ ಪ್ರದೇಶಕ್ಕೆ ಸಂಪರ್ಕ ಕಡಿತ

    ಸಿರಗುಪ್ಪ: ತಾಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ರಾರಾವಿ ಸಮೀಪದ ಯಲ್ಲಮ್ಮನ ಹಳ್ಳಕ್ಕೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ನಾಗರಹಾಳು ಗ್ರಾಮದಲ್ಲಿ ಮನೆಯ ಛಾವಣಿ ಕುಸಿದಿದೆ.

    ಸತತ ಎರಡು ದಿನ ಮಳೆ ಸುರಿದಿದ್ದರಿಂದ ರಾರಾವಿ ಸಮೀಪದ ಯಲ್ಲಮ್ಮನ ಹಳ್ಳಕ್ಕೆ ಹೆಚ್ಚಿನ ನೀರು ಹರಿದು ಬಂದಿದೆ. ಇದರಿಂದ ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ನಗರದಿಂದ ಸೀಮಾಂಧ್ರ ಪ್ರದೇಶಕ್ಕೆ ಸಂಪರ್ಕ ಕಡಿತವಾಗಿದೆ. ಸಂಚಾರ ಸ್ಥಗಿತದಿಂದ ಪ್ರಯಾಣಿಕರು ಪರದಾಡುವಂತಾಗಿದ್ದು, ಸುತ್ತಿ ಬಳಸಿ ಪ್ರಯಾಣ ಮಾಡಬೇಕಾಗಿದೆ. ಪ್ರತಿ ಮಳೆಗಾಲದಲ್ಲಿ ಹಳ್ಳಕ್ಕೆ ನೀರು ಹರಿದು ಬಂದು ಸಂಚಾರಕ್ಕೆ ಅಡಚಣೆ ಆಗುತ್ತಿದ್ದರಿಂದ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿತ್ತು. ಕಾಮಗಾರಿ ಪ್ರಗತಿಯಲ್ಲಿದ್ದು, ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ಇನ್ನು ನಾಗರಹಾಳು ಗ್ರಾಮದ ಲಲಿತಮ್ಮ ಎನ್ನುವವರ ಮನೆಯ ಛಾವಣಿ ಸಂಪೂರ್ಣ ಕುಸಿದಿದಿ. ರಾತ್ರಿ ಎಂದಿನಂತೆ ಊಟ ಮಾಡಿ ಮನೆಯವರೆಲ್ಲ ಹೊರಗಡೆ ಬಂದ ಬಳಿಕ ಛಾವಣಿ ಬಿದ್ದಿದ್ದು, ಅನಾಹುತ ತಪ್ಪಿದಂತಾಗಿದೆ. ಗ್ರಾಮಲೆಕ್ಕಾಧಿಕಾರಿ ಮಹ್ಮದ್ ರಫೀಕ್ ಭೇಟಿ ನೀಡಿ ಪರಿಶೀಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts