More

    ಸಿರಗುಪ್ಪ ತಾಲೂಕಿನಲ್ಲಿ ಉತ್ತಮವಾಗಿ ಸುರಿದ ಮುಂಗಾರು, ಬಿತ್ತನೆ ಕಾರ್ಯ ಆರಂಭ

    ಸಿರಗುಪ್ಪ: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ತಾಲೂಕಿನಲ್ಲಿ ಒಂದು ವಾರದಿಂದ ಉತ್ತಮ ಮಳೆಯಾಗಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಬಾರಿ ಮುಂಗಾರು ಹಂಗಾಮಿನಲ್ಲಿ 53 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹಾಕಿಕೊಂಡಿದೆ. ಈಗಾಗಲೇ ಬಿತ್ತನೆ ಕಾರ್ಯ ಆರಂಭಗೊಂಡಿದೆ.

    ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಬೇಕಾದ ಬೀಜ, ಗೊಬ್ಬರ ದಾಸ್ತಾನು ಮಾಡಿಕೊಂಡು ವಿತರಣೆ ಆರಂಭಿಸಿದೆ. ಬಿತ್ತನೆ ಗುರಿಯಲ್ಲಿ 31 ಸಾವಿರ ಹೆಕ್ಟೆರ್ ಭತ್ತ, 22ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಏಕದಳ, ದ್ವಿದಳ, ಹತ್ತಿ, ಕಬ್ಬು ಮುಂತಾದ ಬೆಳೆಗಳನ್ನು ಬೆಳೆಯುವ ಗುರಿ ಇರಿಸಿಕೊಂಡಿದೆ.

    ತಾಲೂಕಿನ ಹಚ್ಚೊಳ್ಳಿ, ತೆಕ್ಕಲಕೋಟೆ, ಸಿರಗುಪ್ಪ, ಕರೂರು ಹೋಬಳಿಯ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಳೆಯಾದ ಭಾಗದಲ್ಲಿ ಈಗಾಗಲೇ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ, ಜೋಳ, ಸೂರ್ಯಕಾಂತಿ ಬಿತ್ತನೆ ಕಾರ್ಯ ನಡೆದಿದೆ. ಇನ್ನೊಂದು ಉತ್ತಮ ಮಳೆ ಬಂದರೆ ಮಳೆಯಾಶ್ರಿತ ಪ್ರದೇಶದ ರೈತರು ಹತ್ತಿ ಸೇರಿ ದ್ವಿದಳ ಧಾನ್ಯ, ಏಕದಳ ಧಾನ್ಯ ಬೆಳೆಯಲು ಭೂಮಿ ಸಿದ್ಧಮಾಡಿಟ್ಟುಕೊಂಡಿದ್ದಾರೆ.

    ತಾಲೂಕಿನಲ್ಲಿ ಇಲ್ಲಿಯವರಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಇಲ್ಲಿಯವರೆಗೆ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಕಾರ್ಯ ಮುಗಿದಿದೆ. ಇನ್ನೂ ಉತ್ತಮ ಮಳೆ ಸುರಿದರೆ ರೈತರು ಬಿತ್ತನೆ ಕಾರ್ಯವನ್ನು ನಡೆಸಲಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts