More

    ಸಂಸ್ಕೃತಿ ಉಳಿಸಲು ವಿದ್ಯಾರ್ಥಿಗಳು ಮುಂದಾಗಲಿ

    ಸಿರಗುಪ್ಪ: ಭಾರತೀಯ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದಕ್ಕಾಗಿ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಾಲೂಕು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಚ್. ಪಂಪಾಪತಿ ಹೇಳಿದರು.

    ತಾಲೂಕಿನ ತೆಕ್ಕಲಕೋಟೆಯ ಬಾಪೂಜಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ತೆಕ್ಕಲಕೋಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕೇವಲ ಪಠ್ಯ ಪುಸ್ತಕಕ್ಕಷ್ಟೇ ವಿದ್ಯಾರ್ಥಿಗಳು ಸೀಮಿತರಾಗದೆ ಆಟೋಟಗಳು, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಇಸಿಒ ಬಸವರಾಜಯ್ಯ, ಬಿಆರ್‌ಸಿ ರುದ್ರವೇಣಿ, ಸಿಆರ್‌ಪಿ ಮಹಮ್ಮದ್ ಫಯಾಜ್, ಮುಖ್ಯಗುರು ಫಾರುಕ್, ಶಿಕ್ಷಕರಾದ ವೈ.ಹನುಮನಗೌಡ, ಕೆ.ನಾಗರಾಜ, ಹೊನ್ನೂರಪ್ಪ, ಪಾಲಾಕ್ಷಿಗೌಡ ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts