More

    ಸಿರಗುಪ್ಪದಲ್ಲಿ ಮಳೆಗೆ ಕೊಚ್ಚಿ ಹೋದ ಹಳ್ಳದ ಸೇತುವೆ, ಏಳು ತಿಂಗಳಲ್ಲಿ ಮೂರನೇ ಬಾರಿ ಟನೆ

    ಸಿರಗುಪ್ಪ: ತಾಲೂಕಿನ ರಾರಾವಿ ಗ್ರಾಮದ ಮೇಲ್ಭಾಗದಲ್ಲಿ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಯಲ್ಲಮ್ಮನ ಹಳ್ಳಕ್ಕೆ ಹೆಚ್ಚು ನೀರು ಹರಿದು ಬಂದಿದ್ದರಿಂದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.

    ಕಳೆದ ವರ್ಷ ಮಳೆಗಾಲದಲ್ಲಿ ಸೇತುವೆಯಿಂದ 5 ಲಾರಿ, 2 ಬಸ್ ಆಯತಪ್ಪಿ ಹಳ್ಳಕ್ಕೆ ಬಿದ್ದಿದ್ದವು. ಹೀಗಾಗಿ 4 ಕೋಟಿ ರೂ. ವೆಚ್ಚದಲ್ಲಿ ಸೇತುವೆ ಎತ್ತರಿಸುವ ಕಾಮಗಾರಿ 7 ತಿಂಗಳ ಹಿಂದೆ ಆರಂಭವಾಗಿದೆ. ಆದರೆ ನಿರ್ಮಾಣ ಕಾರ್ಯ ಕುಂಟುತ್ತಾ ಸಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕೆ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿತ್ತು. ಅದು ಈಗ ಮಳೆ ನೀರಿಗೆ ಕೊಚ್ಚಿ ಹೋಗುತ್ತಿದ್ದು, ಇದು ಮೂರನೇ ಸಲವಾಗಿದೆ. ಇದರಿಂದ ಜನರ ಸಂಚಾರಕ್ಕೆ ಅಡಚಣೆಯಾಗಿದ್ದು, ಪರ್ಯಾಯ ಮಾರ್ಗಗಳಿಗೆ ಮೊರೆ ಹೋಗುತ್ತಿದ್ದಾರೆ.

    ನಿಗದಿತ ಅವಧಿಯಲ್ಲಿ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದೆಂದು ಲೋಕೋಪಯೋಗಿ ಇಲಾಖೆ ಎಇಇ ಮುತ್ತಯ್ಯ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts