More

    ಬೆಳೆ ನಷ್ಟ ಸಮೀಕ್ಷೆ ನಡೆಸುವಂತೆ ಸೂಚನೆ

    ಸಿರಗುಪ್ಪ: ಸತತ ಮಳೆ ಹಾಗೂ ವೇದಾವತಿ ಹಗರಿ ನದಿ ಮತ್ತು ದೊಡ್ಡ ಹಳ್ಳದಿಂದ ಭತ್ತ, ಹತ್ತಿ, ಮೆಣಸಿನಕಾಯಿ ಜಮೀನುಗಳಿಗೆ ನೀರು ನುಗ್ಗಿದ್ದು, ಬೆಳೆ ನಷ್ಟದ ಬಗ್ಗೆ ಸಮೀಕ್ಷೆ ನಡೆಸುವಂತೆ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ತಿಳಿಸಿದರು.

    ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕರೂರು ಗ್ರಾಮದಲ್ಲಿ ಹಳ್ಳಕ್ಕೆ ಬಿದ್ದು ಒಂದು ಎಮ್ಮೆ ಸತ್ತಿದೆ. ಊಳೂರು ಗ್ರಾಮದಲ್ಲಿ ಸರ್ಕಾರಿ ಶಾಲೆ, ಎರಡು ಹೋಟೆಲ್‌ಗಳು, ಒಂದು ಶುದ್ಧ ಕುಡಿಯುವ ನೀರಿನ ಘಟಕಕ್ಕೆ ವೇದಾವತಿ ಹಗರಿ ನದಿನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts