More

    ಮೇಲ್ಮನೆಯಲ್ಲೂ ಬಿಜೆಪಿಗೆ ಬಹುಮತ ನೀಡಲು ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ

    ಸಿರವಾರ: ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದುವ ಮೂಲಕ ಸರ್ಕಾರವನ್ನು ರಚನೆ ಮಾಡಿದ್ದು, ಮೇಲ್ಮನೆಯಲ್ಲೂ ಬಿಜೆಪಿಗೆ ಬಹುಮತ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

    ಸ್ಥಳೀಯ ಚುಕ್ಕಿ ಕಲ್ಯಾಣ ಮಂಟಪದಲ್ಲಿ ವಿಧಾನ ಪರಿಷತ್ ಚುನಾವಣೆ ನಿಮಿತ್ತ ಬಿಜೆಪಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದರು. ವಿಧಾನ ಪರಿಷತ್‌ನಲ್ಲಿ ಪಕ್ಷಕ್ಕೆ ಬಹುಮತ ಇಲ್ಲದ ಕಾರಣ ವಿಧಾನಸಭೆಯಲ್ಲಿ ಒಪ್ಪಿಗೆ ನೀಡಿ ಕಳುಹಿಸಿದ ಬಿಲ್‌ಗಳನ್ನು ವಾಪಸ್ ಕಳುಹಿಸುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯುಂಟಾಗುತ್ತಿದೆ. ಮತದಾರರು ಜಾತಿ, ಹಣಕ್ಕೆ ಬೆಲೆ ನೀಡದೆ ಸಿದ್ಧಾಂತಕ್ಕೆ ಬೆಲೆ ನೀಡಬೇಕಾಗಿದೆ. ಚಹಾ ಮಾರುವ ವ್ಯಕ್ತಿಯನ್ನು ಬಿಜೆಪಿ ಪ್ರಧಾನಿಯನ್ನಾಗಿ ಮಾಡಿದ್ದು, ಪ್ರಧಾನಿ ಮೋದಿ ಯುವಕರ ಮೇಲೆ ಇಟ್ಟಿರುವ ಭರವಸೆಯನ್ನು ಸಾಕಾರಗೊಳಿಸಬೇಕು. ಅವಕಾಶವಾದಿ ಪಕ್ಷವಾಗಿರುವ ಕಾಂಗ್ರೆಸ್‌ಅನ್ನು ಸೋಲಿಸಬೇಕು. ಕಾಂಗ್ರೆಸ್‌ನವರಿಗೆ ಬಿಜೆಪಿ ವಿರುದ್ಧ ಆರೋಪ ಮಾಡಲು ವಿಷಯಗಳಿಲ್ಲ. ಹೀಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಬಿಟ್ ಕಾಯಿನ್ ದಂಧೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ನಡೆದಿದ್ದು, ಅಂದು ಲಾಭ ಮಾಡಿಕೊಂಡಿದ್ದ ಕಾಂಗ್ರೆಸ್ ನಾಯಕರು ಸರ್ಕಾರ ಮೇಲೆ ಗೂಬೆ ಕೂರಿಸಲು ಮುಂದಾಗಿದ್ದಾರೆ ಎಂದರು.

    ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಮಾತನಾಡಿ, ಹಿಂದುಳಿದ ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಕೆಕೆಆರ್‌ಡಿಬಿಗೆ 3 ಸಾವಿರ ಕೋಟಿ ರೂ. ನೀಡುವುದಾಗಿ ಸಿಎಂ ಹೇಳಿದ್ದು, ಬಸವಕಲ್ಯಾಣ ಅಭಿವೃದ್ಧಿಗೆ 500 ಕೋಟಿ ರೂ. ನೀಡಲಾಗಿದೆ. ಈ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲಾಗಿದ್ದು, ಮಹಿಳೆಯರು ಉದ್ಯಮದಲ್ಲಿ ತೊಡಗಿಕೊಳ್ಳಲು ಉತ್ತೇಜನ ನೀಡಲಗುತ್ತಿದೆ ಎಂದರು.

    ಸಂಸದ ಪ್ರತಾಪ ಸಿಂಹ ಮಾತನಾಡಿ, ಬಿಜೆಪಿ ಸಂಘ ಪರಿವಾರದ ಸಿದ್ಧಾಂತದಿಂದ ಹುಟ್ಟಿದ್ದು, ಆದರೆ, ಕಾಂಗ್ರೆಸ್ ಬ್ರಿಟಿಷರಿಂದ ಹುಟ್ಟಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿದ್ದು, ಸಿದ್ದರಾಮಯ್ಯ ಹಿಟ್ ಆ್ಯಂಡ್ ರನ್ ಮನುಷ್ಯ. ಇನ್ನೂ ಅಪ್ಪನ ಹೆಸರಿನಲ್ಲಿ ಬೆಳದು ಬಂದ ಪ್ರಿಯಾಂಕ ಖರ್ಗೆ ಸ್ತ್ರೀ ಲಿಂಗವೋ, ಪುಲ್ಲಿಂಗವೋ ಎಂದು ಗೊತ್ತಾಗುತ್ತಿಲ್ಲ ಎಂದು ಲೇವಡಿ ಮಾಡಿದರು.

    ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ್, ಕೆ.ಶಿವನಗೌಡ ನಾಯಕ, ರಾಜುಗೌಡ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಮಾತನಾಡಿದರು. ಕೊಪ್ಪಳ ಸಂಸದ ಸಂಗಣ್ಣ ಕರಡಿ, ಕನಕಗಿರಿ ಶಾಸಕ ಬಸವರಾಜ ದಢೇಸುಗೂರು, ಎಂಎಲ್ಸಿ ಶಶೀಲ್ ನಮೋಶಿ, ಮಾಜಿ ಶಾಸಕರಾದ ಬಸವನಗೌಡ ಬ್ಯಾಗವಾಟ, ಗಂಗಾಧರ ನಾಯಕ, ತಿಪ್ಪರಾಜು ಹವಾಲ್ದಾರ್, ಮಾಜಿ ಎಂಎಲ್ಸಿಗಳಾದ ಎನ್.ಶಂಕ್ರಪ್ಪ, ಮುಖಂಡರಾದ ಶಂಕರಗೌಡ ಹರವಿ, ಜೆ.ಶರಣಪಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts