ಜೀವನ ಮೌಲ್ಯ ಮಕ್ಕಳಲ್ಲಿ ಬಿತ್ತಿ

ಸಿರಿಗೆರೆ: ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ಜೀವನ ಮೌಲ್ಯ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು, ಪಾಲಕರು ಕಾರ್ಯಪವೃತ್ತರಾಗಬೇಕು ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಬಿ.ಲಿಂಗಯ್ಯ ಪದವಿ ಪೂರ್ವ ಕಾಲೇಜಿನಿಂದ ಇಲ್ಲಿನ ಗುರುಶಾಂತೇಶ್ವರ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಅನ್ನದ ಹಸಿವಿಗಿಂತ ಜ್ಞಾನದ ಹಸಿವು ತಣಿಸಲು ಪ್ರಾಮುಖ್ಯತೆ ನೀಡಬೇಕು. ಶಿಸ್ತು, ಶ್ರದ್ಧೆ ಮೈಗೂಡಿಸಿಕೊಂಡು ಗುರಿಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನ ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಸಿದ್ದಪ್ಪ ಮಾತನಾಡಿ, ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ತಾವು ಕಲಿತ ವಿದ್ಯೆಗೆ ಪೂರಕ ಕೌಶಲ ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ದಾವಣಗೆರೆ ಡಯಟ್ ಉಪನಿರ್ದೇಶಕ ಎಚ್.ಕೆ.ಲಿಂಗರಾಜು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ವಿಪುಲ ಅವಕಾಶಗಳಿವೆ. ಸೂಕ್ತ ಕೌಶಲ ಹಾಗೂ ಮಾರ್ಗದರ್ಶನದಿಂದ ತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.

ಅತಿ ಹೆಚ್ಚು ಅಂಕ ಗಳಿಸಿ ಚಿನ್ನದ ಪದಕಕ್ಕೆ ಭಾಜನರಾದ ಎಚ್.ಪುನೀತ್‌ಕುಮಾರ್‌ಗೆ ಶ್ರೀಗಳು ಪದಕ ನೀಡಿ ಗೌರವಿಸಿದರು. 24 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಚಟುವಟಿಕೆ ನಡೆದವು.

ಅಧ್ಯಾಪಕ ಎಚ್.ಎ.ವಿಶ್ವಕುಮಾರ್, ಕ್ರೀಡಾ ಕಾರ್ಯದರ್ಶಿ ವೈ.ಡಿ.ಚಂದ್ರಶೇಖರಪ್ಪ, ಸಾಂಸ್ಕೃತಿಕ ಚಟುವಟಿಕೆ ಸಂಘದ ಕಾರ್ಯದರ್ಶಿ ಬಿ.ಜಯಮ್ಮ, ಎನ್‌ಎಸ್‌ಎಸ್ ಯೋಜನಾಧಿಕಾರಿ ಪ್ರಕಾಶ್ ಬಣಕಾರ್ ಇತರರಿದ್ದರು.

Leave a Reply

Your email address will not be published. Required fields are marked *