16 C
Bangalore
Saturday, December 7, 2019

ಆಧಾರ್ ಕೇಂದ್ರಗಳಲ್ಲಿ ಹೆಚ್ಚು ಹಣ ವಸೂಲಿ!

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಪರಿಶೀಲನೆಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ಕೊಟ್ರೇಶ ಸೂಚನೆ | ಸರ್ಕಾರಿ ಸ್ಥಳ ಗುರುತಿಸಿ ನಾಮಫಲಕ ಹಾಕಿ | 13ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಸಿರಗುಪ್ಪ: ಆಧಾರ್ ಸೇವಾ ಕೇಂದ್ರಗಳಲ್ಲಿ ನೋಂದಣಿ, ತಿದ್ದುಪಡಿಗೆ 10 ರೂ. ಶುಲ್ಕ ನಿಗದಿಪಡಿಸಿದೆ. ಆದರೆ, ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳಿದ್ದು, ಕೂಡಲೇ ಕ್ರಮಕೈಗೊಳ್ಳಬೇಕು ಎಂದು ತಹಸೀಲ್ದಾರ್ ಎಸ್.ಬಿ.ಕೂಡಲಗಿಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ಕೊಟ್ರೇಶ ಸೂಚಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು. ಸರ್ಕಾರದ ಸೌಲಭ್ಯ ಪಡೆಯಲು ಆಧಾರ್‌ಕಾರ್ಡ್ ಅಗತ್ಯವಿದೆ. ಆಧಾರ್ ಕಾರ್ಡ್ ನೋಂದಣಿ, ತಿದ್ದುಪಡಿ ಮಾಡುವ ಬ್ಯಾಂಕ್, ತಹಸಿಲ್ ಕಚೇರಿ, ಅಂಚೆ ಕಚೆೇರಿ ಸೇರಿ ಸೇವಾ ಕೇಂದ್ರಗಳಲ್ಲಿ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ಸಾರ್ವಜನಿಕರಿಂದ ಪಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ತಹಸೀಲ್ದಾರ್ ಕೂಡಲಗಿಗೆ ತಿಳಿಸಿದರು. ಸರ್ಕಾರಿ ಜಾಗವನ್ನು ಸಂರಕ್ಷಿಸುವುದು ಪ್ರತಿ ಇಲಾಖೆ ಕರ್ತವ್ಯವಾಗಿದೆ. ವಿವಿಧ ಕಚೇರಿಗಳನ್ನು ನಿರ್ಮಿಸಲು ಸರ್ಕಾರಿ ಸ್ಥಳದ ಅಗತ್ಯವಿದೆ. ಆದ್ದರಿಂದ ಅಳತೆಮಾಡಿ ಗಡಿ ಗುರುತಿಸಿ ಸರ್ಕಾರಕ್ಕೆ ಸೇರಿದ್ದು ಎನ್ನುವ ನಾಮಫಲಕ ಹಾಕಿಸಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸುವುದೇ ಲೋಕಾಯುಕ್ತ ಸಂಸ್ಥೆಯ ಕರ್ತವ್ಯವಾಗಿದ್ದು, ಸಭೆಗೆ ತಾಲೂಕು ಮಟ್ಟದ ವಿವಿಧ ಇಲಾಖೆ ಮುಖ್ಯ ಅಧಿಕಾರಿಗಳು ಖುದ್ದಾಗಿ ಹಾಜರಾಗಬೇಕು. ಬದಲಿಗೆ ಸಿಬ್ಬಂದಿಯನ್ನು ಕಳಿಸುವುದು ಹಾಗೂ ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ಕೊಟ್ರೇಶ ಎಚ್ಚರಿಸಿದರು. ಕಳೆದ ಬಾರಿ ನಡೆದ ಸಭೆಯಲ್ಲಿ 10 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ಬಹುತೇಕ ಅರ್ಜಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಪರಿಹಾರ ಕಂಡುಕೊಂಡಿದ್ದಾರೆ. ಈ ಬಾರಿ ಸಭೆಯಲ್ಲಿ 13ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ನಗರಸಭೆ ವ್ಯಾಪ್ತಿಗೆ ಸೇರಿದ ದೂರುಗಳೇ ಹೆಚ್ಚಿವೆ ಎಂದರು.

ತಾಪಂ ಇಒ ಶಿವಪ್ಪ ಸುಬೇದಾರ್, ತಹಸೀಲ್ದಾರ್ ಎಸ್.ಬಿ.ಕೂಡಲಗಿ, ಸಿಪಿಐ ರಮೇಶ್ ಪವರ್, ಪಿಎಸ್‌ಐ ಗಂಗಪ ್ಪಬುರ್ಲಿ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...