More

  ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

  ಸಿರವಾರ: ಪಟ್ಟಣದ ಬಸ್ ನಿಲ್ದಾಣ ಕಟ್ಟಡ ಕಾಮಗಾರಿಯನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಗುರುವಾರ ಸಂಜೆ ಪರಿಶೀಲಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 3 ಕೋಟಿ ರೂ. ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿ ಆಮೆಗತಿಯಲ್ಲಿ ನಡೆದಿದೆ.

  ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಂಜಿನಿಯರ್‌ನನ್ನು ತರಾಟೆಗೆ ತೆಗೆದುಕೊಂಡರು. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು. ಹೆಚ್ಚಿನ ಅನುದಾನ ಬೇಕಿದ್ದರೆ ಮಂಜೂರು ಮಾಡಿಸುವುದಾಗಿ ಹೇಳಿದರು.

  ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ಮಲ್ಲಿಕಾರ್ಜುನ ಪಾಟೀಲ್ ಬಲ್ಲಟಗಿ, ಪ್ರಮುಖರಾದ ಜಿ.ಲೋಕರೆಡ್ಡಿ, ಸುಧಾಕರ್, ಗ್ಯಾನಪ್ಪ, ನಾಗರಾಜ, ಶಾಂತಪ್ಪ , ವಲೀ ಗುತ್ತೇದಾರ, ಎಂ.ಡಿ.ಇಸ್ಮಾಯಿಲ್ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts