More

    ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನ ನೀಡಿ


    ಬಸವೇಶ್ವರ ಕಾಲೇಜ್ ಅಧ್ಯಕ್ಷ ನರಸಿಂಹರಾವ್ ಕುಲ್ಕರ್ಣಿ ಸಲಹೆ

    ಸಿರವಾರ: ಸ್ವದೇಶಿ ವಸ್ತುಗಳನ್ನು ಉಪಯೋಗಿಸುವ ಮೂಲಕ ಅವುಗಳಿಗೆ ಉತ್ತೇಜನ ನೀಡಬೇಕು ಎಂದು ಬಸವೇಶ್ವರ ಕಾಲೇಜ್ ಅಧ್ಯಕ್ಷ ನರಸಿಂಹರಾವ್ ಕುಲ್ಕರ್ಣಿ ಹೇಳಿದರು.

    ಪಟ್ಟಣದ ಬಸವೇಶ್ವರ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ, ನವಭಾರತ ನಿರ್ಮಾಣ ಯುವಕ ಸಂಘದಿಂದ ಸೋಮವಾರ ಆಯೋಜಿಸಿದ್ದ ಆತ್ಮನಿರ್ಭರ ಭಾರತ, ಯುವಜನ ಸ್ವಯಂ-ಅವಲಂಬಿತ ಯೋಜನೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶ ಮತ್ತು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾವಲಂಬಿ ಜೀವನ ನಡೆಸಬೇಕೆಂಬ ಕಾರಣಕ್ಕೆ ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಜಾರಿಗೆ ತಂದಿದೆ ಎಂದರು.

    ಸ್ವದೇಶಿ ಉತ್ಪನ್ನಗಳನ್ನು ಉಪಯೋಗ ಮಾಡುವುದರಿಂದ ದೇಶದ ಆರ್ಥಿಕತೆ ಬಲಗೊಳ್ಳಲಿದೆ. ಬೀದಿ ಬದಿಯ ವ್ಯಾಪಾರಿಗಳಿಗಾಗಿ ಮುದ್ರಾ, ಬಡವರ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ನರಸಿಂಹರಾವ್ ಕುಲ್ಕರ್ಣಿ ಹೇಳಿದರು. ನಿತ್ಯ ಬಳಕೆಯ ವಸ್ತುಗಳಲ್ಲಿ ಸ್ವದೇಶಿ ವಸ್ತುಗಳನ್ನು ಬಳಸುವಂತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಬೋಧಿಸಲಾಯಿತು. ಕಾಲೇಜ್‌ನ ಖಜಾಂಚಿ ಪ್ರವೀಣ ಕುಮಾರ ಜೇಗರಕಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts