More

    ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ ಎಂದ ಬೃಹನ್ಮಠದ ಪೀಠಾಧಿಪತಿ ಅಭಿನವ ಶ್ರೀ ಸೋಮನಾಥ ಶಿವಾಚಾರ್ಯ

    ಸಿರವಾರ: ಸಾಮೂಹಿಕ ವಿವಾಹದಲ್ಲಿ ಮದುವೆ ಮಾಡಿಕೊಳ್ಳುವುದರಿಂದ ದುಂದು ವೆಚ್ಚಕ್ಕೆ ಕಡಿವಾಣ ಹಾಕುವುದರ ಜತೆಗೆ ಗುರುಗಳ ಆಶೀರ್ವಾದವಾಗುತ್ತದೆ ಎಂದು ನವಲಕಲ್ ಬೃಹನ್ಮಠದ ಪೀಠಾಧಿಪತಿ ಅಭಿನವ ಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

    ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ಶುಕ್ರವಾರ ರಾಮಲಿಂಗೇಶ್ವರ ಹಾಗೂ ಚೌಡೇಶ್ವರಿ ದೇವಸ್ಥಾನದ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಳವಾಗಿ ವಿವಾಹವಾಗುವುದರಿಂದ ಆರ್ಥಿಕ ನಷ್ಟಕ್ಕೆ ಕಡಿವಾಣ ಹಾಕಬಹುದು ಎಂದರು. ಇಂತಹ ಸಾಮಾಜಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ, ಸರಳ ವಿವಾಹಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.

    ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮದುವೆಯಾದ ವಧುಗಳು ಅತ್ತೆ ಮಾವನನ್ನು ತಂದೆ ತಾಯಿಗಳಂತೆ ಕಾಣಬೇಕು. ಆಗ ಮಾತ್ರ ಜೀವನ ಸಾರ್ಥಕ ಎಂದರು. ಇದೇ ವೇಳೆ 21 ಜೋಡಿ ನವ ವಧುವರರು ನೂತನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶ್ರೀಶೈಲಪ್ಪ ತಾತ, ಅಯ್ಯಪ್ಪ ತಾತ ಮಲ್ಲದಗುಡ್ಡ, ಕಾಳಪ್ಪ ತಾತ ಕಾರಟಗಿ, ಗುರು ಬಸಯ್ಯ ಸ್ವಾಮಿ ಬಲ್ಲಟಗಿ, ಮಾಜಿ ಶಾಸಕ ಜಿ.ಹಂಪಯ್ಯ ನಾಯಕ, ಪೆದ್ದಯ್ಯ ನಾಯಕ, ಮುದ್ದಪ್ಪ ಸಾಹುಕಾರ್, ಬಸವರಾಜ ಕೊಡೇಕಲ್, ಬಸ್ಸಪ್ಪ ಪೋತ್ನಾಳ, ರಂಗನಾಥ ಶಿಕ್ಷಕ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts