More

    ಏಮ್ಸ್ ಮಂಜೂರಾಗದೆ ಹೋರಾಟ ನಿಲ್ಲದು; ಸಮಿತಿ ಮುಖ್ಯಸ್ಥ ಬಸವರಾಜ ಕಳಸ ಎಚ್ಚರಿಕೆ

    ಸಿರವಾರ: ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರಾತಿಗೆ ಸರ್ಕಾರ ಮತ್ತು ಈ ಭಾಗದ ಜನಪ್ರನಿಧಿಗಳು ನಿರ್ಲಕ್ಷಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಮಾಡು, ಇಲ್ಲವೇ ಮಡಿ ಎನ್ನುವಂತಾಗಿದೆ ಎಂದು ಏಮ್ಸ್ ಹೋರಾಟ ಸಮಿತಿ ಮುಖ್ಯಸ್ಥ ಬಸವರಾಜ ಕಳಸ ಹೇಳಿದರು.

    ಏಮ್ಸ್ ಮಂಜೂರಾತಿಗಾಗಿ ರಾಯಚೂರುನಿಂದ ಅರಕೇರಾ ಗ್ರಾಮದವರೆಗೆ ಪಾದಯಾತ್ರೆ ಮೂಲಕ ಆಗಮಿಸಲಾಗಿದೆ. ಈ ಹಿಂದೆ ಜಿಲ್ಲೆಗೆ ಐಐಟಿ ಮಂಜೂರು ಮಾಡಿ ನಂತರ ರಾಜಕೀಯ ಷಡ್ಯಂತ್ರದಿಂದ ಧಾರವಾಡಕ್ಕೆ ತೆಗೆದುಕೊಂಡು ಹೋದರು. ಇದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

    ಏಮ್ಸ್ ಮಂಜೂರು ಮಾಡುವಂತೆ ಜಿಲ್ಲೆಯಲ್ಲಿ 156 ದಿನಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ ಈ ಭಾಗದ ಜನಪ್ರತಿನಿಧಿಗಳು ಒಮ್ಮೆಯೂ ಭೇಟಿ ನೀಡಿಲ್ಲ. ಸದನದಲ್ಲಿ ಸರ್ಕಾರದ ಗಮನಸೆಳೆಯಲು ಇದರ ಬಗ್ಗೆ ಚರ್ಚೆಯೂ ನಡೆಯುತ್ತಿಲ್ಲ ಎಂದು ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts