
ಸಿರವಾರ: ತಾಲೂಕಿನ ಅತ್ತನೂರು ಗ್ರಾಮದ ಸೋಮವಾರಪೇಟೆ ಹಿರೇಮಠದ ಲಿಂ. ಶ್ರೀ ರಾಚೋಟಿ ವೀರ ಶಿವಾಚಾರ್ಯರ 21ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಪುರಾಣ ಮಹಾಮಂಗಲ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಬುಧವಾರ ನಡೆಯಿತು.
ಅಭಿನವ ಶ್ರೀ ರಾಚೋಟಿ ವೀರ ಶಿವಾಚಾರ್ಯರು ಮಾತನಾಡಿ, ಭಕ್ತರು ಸೇರಿಕೊಂಡು ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಗಳನ್ನು ಸಡಗರದಿಂದ ಮಾಡುತ್ತಿರುವುದು ಸಂತಸ ತಂದಿದೆ. ಲಿಂ.ರಾಚೋಟಿ ಶ್ರೀಗಳ ಪುಣ್ಯಸ್ಮರಣೆಯನ್ನು ಎಲ್ಲರೂ ಸೇರಿ ಮಾಡುತ್ತಿರುವುದರಿಂದಲೇ ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.
ಸಾಮೂಹಿಕ ವಿವಾಹದಲ್ಲಿ 6 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ವೀರಭದ್ರ ಶಿವಾಚಾರ್ಯರು, ಗಬ್ಬೂರಿನ ಬೂದಿಬಸವ ಶಿವಾಚಾರ್ಯರು, ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯರು, ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲ ಶಿವಾಚಾರ್ಯರು, ಸುಲ್ತಾನಪುರ ಬೃಹನ್ಮಠದ ಶಂಭು ಸೋಮನಾಥ ಶಿವಾಚಾರ್ಯರು, ವೀರ ಸಂಗಮೇಶ್ವರ ಶಿವಾಚಾರ್ಯರು, ಜಾಗಟಗಲ್ ರಾಚಪ್ಪಯ್ಯ ತಾತ, ವಿರೂಪಾಕ್ಷಯ್ಯ ತಾತ, ಬೆಟ್ಟಪ್ಪತಾತ, ಸಾಂಬಪ್ಪಯ್ಯ ತಾತ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ್, ಚುಕ್ಕಿ ಸೂಗಪ್ಪ ಸಾಹುಕಾರ್‌ಇತರರಿದ್ದರು.