ಬಾರ್ ಬಾಗಿಲು ಮುರಿದು ಮದ್ಯ ಕಳವು

ಸಿರವಾರ: ಪಟ್ಟಣದ ವಿಶ್ವಲಾಡ್ಜ್‌ನಲ್ಲಿರುವ ವಿಶ್ವಬಾರ್‌ನಲ್ಲಿ ಭಾನುವಾರ ಬೆಳಗಿನ ಜಾವ 8 ಸಾವಿರ ಮೌಲ್ಯದ ಮದ್ಯದ ಬಾಟಲ್ ಕಳವಾಗಿವೆ. ಬಾರ್ ಹಿಂದಿನ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ. ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮರಾ ಹಾಕಿದರೂ ಕಳ್ಳತನಕ್ಕೆ ಕಡಿವಾಣ ಬೀಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *