More

    ಭ್ರಷ್ಟಾಚಾರದಲ್ಲಿ ಸಿಕ್ಕಿಕೊಂಡಿರುವ ವಿಶೇಷ ಕರ್ತವ್ಯ ಅಧಿಕಾರಿಯನ್ನು ಶಿಕ್ಷಿಸಿ ಎಂದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ

    ನವದೆಹಲಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ತಮ್ಮ ಕಚೇರಿಯ ವಿಶೇಷ ಕರ್ತವ್ಯ ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಆಗ್ರಹಿಸಿದ್ದಾರೆ.

    ಜಿಎಸ್​ಟಿಗೆ ಸಂಬಂಧಿಸಿ ಉದ್ಯಮಿಯೊಬ್ಬರಿಂದ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ವಿಶೇಷ ಕರ್ತವ್ಯ ಅಧಿಕಾರಿ ಗೋಪಾಲ್ ಕೃಷ್ಣ ಮಾಧವ್ ಅವರನ್ನು ಗುರುವಾರ ರಾತ್ರಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

    ತಮ್ಮ ಕಚೇರಿಯ ವಿಶೇಷ ಕರ್ತವ್ಯ ಅಧಿಕಾರಿ ಬಂಧನವನ್ನು ದೃಢಪಡಿಸಿರುವ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಟ್ವೀಟ್​ ಮಾಡಿದ್ದಾರೆ.

    ಮಾಧವ್​ ಅವರು ನನ್ನ ಕಚೇರಿಯಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕವಾಗಿದ್ದರು. ಇವರಂತೆ 5 ವರ್ಷಗಳಲ್ಲಿ ಅನೇಕ ಭ್ರಷ್ಟ ಅಧಿಕಾರಿಗಳು ನನ್ನ ಕಚೇರಿಯಲ್ಲಿ ಇದ್ದರು. ಇವರಿಂದ ನಾನು ಹಲವು ಬಾರಿ ಸಮಸ್ಯೆಗೆ ಸಿಕ್ಕಿಕೊಂಡಿದ್ದೇನೆ ಎಂದು ಅವರು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ.

    ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಅಮಿತ್​ ಮಾಳವೀಯಾ ಅವರು, ದೆಹಲಿ ಉಪ ಮುಖ್ಯಮಂತ್ರಿ ಅವರಿಗೆ ಮಾಹಿತಿ ಇಲ್ಲದೆ ಅವರ ವಿಶೇಷ ಕರ್ತವ್ಯ ಅಧಿಕಾರಿ ಲಂಚ ಪಡೆಯುತ್ತಿದ್ದರು ಎಂಬುದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಕೇಜ್ರಿವಾಲ್​ ಹಾಗೂ ಅವರ ಪಕ್ಷದ ನಾಯಕರು ಭ್ರಷ್ಟಾಚಾರದ ವಿರುದ್ಧ ಚಳವಳಿ ನಡೆಸಿ ಅಧಿಕಾರಕ್ಕೆ ಬಂದವರು. ಈಗ ಅವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts