More

    ಪ್ರಜ್ವಲ್ ಎಲ್ಲಿದ್ದಾರೆ ಎಂಬುದು ಎಸ್‌ಐಟಿಗೆ ಗೊತ್ತಿದೆ, ನನಗೆ ಗೊತ್ತಿಲ್ಲ

    ಬೆಂಗಳೂರು: ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟೀಸ್ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್‌ಐಟಿ ಅಧಿಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಂತಾರಾಷ್ಟ್ರಿಯ ಪೊಲೀಸ್ ಸಂಸ್ಥೆ ಇಂಟರ್‌ಪೋಲ್‌ಗೆ ತಿಳಿಸಿ ಬ್ಲೂ ಕಾರ್ನರ್ ನೋಟೀಸ್ ಜಾರಿಗೊಳಿಸಲಾಗಿದೆ.

    ವಿವಿಧ ದೇಶಗಳ ಪೊಲೀಸರನ್ನು ಸಂಪರ್ಕಿಸಿ ಮೊಬೆಲ್‌ನ ಲೊಕೇಶನ್ ಆಧರಿಸಿ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಅದರ ಬಳಿಕ ಎಸ್‌ಐಟಿ ಅಧಿ ಕಾರಿಗಳು ವಿದೇಶದಿಂದ ಕರೆತರುವ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

    ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಕಾನೂನಿನ ಪ್ರಕಾರವೇ ಕ್ರಮ ಕೆಗೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಎಸ್‌ಐಟಿಯ ಮೇಲೂ ಆಪಾದನೆಗಳು ಬರುವ ಸಾಧ್ಯತೆಯಿದೆ. ಹಾಗಾಗಿ ಕಾನೂನು ಚೌಕಟ್ಟಿನಲ್ಲಿ ಎಲ್ಲವೂ ನಡೆಯಬೇಕು. ನಿಯಮ ಬಿಟ್ಟು ಯಾವುದೇ ಕ್ರಮ ಕೆಗೊಳ್ಳಬಾರದು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ ಎಂದು ತಿಳಿಸಿದರು.

    ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂದು ನನಗೆ ಗೊತ್ತಿಲ್ಲ. ಆದರೆ ಎಸ್‌ಐಟಿ ಅಧಿ ಕಾರಿಗಳಿಗೆ ಮಾಹಿತಿ ಇದೆ. ಭಾರತಕ್ಕೆ ಕರೆದುಕೊಂಡು ಬರುವವರೆಗೂ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ತನಿಖೆ ವಿಚಾರ ಬಹಿರಂಗ ಇಲ್ಲ:

    ತನಿಖೆಗೆ ಸಂಬಂಧಪಟ್ಟಂತೆ ಯಾವುದೇ ವಿಚಾರಗಳನ್ನು ನಾವು ಬಹಿರಂಗಪಡಿಸುತ್ತಿಲ್ಲ. ಮೇಲ್ನೊಟಕ್ಕೆ ಸಾಧುವಾದಂತಹ ಮಾಹಿತಿಯನ್ನು ನಾನೇ ನೇರವಾಗಿ ಮಾತನಾಡುತ್ತಿದ್ದೇನೆ. ಉಳಿದಂತೆ ತನಿಖೆಯ ಆಂತರಿಕ ಮಾಹಿತಿಗಳು ಎಸ್‌ಐಟಿಯ ಒಳ ವಲಯದಲ್ಲೇ ನಡೆಯುತ್ತಿದೆ. ನಮಗೂ ಕೂಡ ತಿಳಿಯುವುದಿಲ್ಲ. ಒಂದು ವೇಳೆ ಎಸ್‌ಐಟಿಯಿಂದ ವಿಚಾರಗಳು ಬಹಿರಂಗಗೊಳ್ಳುತ್ತವೆ ಎಂದಾದರೆ ಮತ್ತಷ್ಟು ಬಿಗಿಗೊಳಿಸುವುದಾಗಿ ಕುಮಾರಸ್ವಾಮಿಯವರ ಟೀಕೆಗೆ ಪ್ರತಿಕ್ರಿಯಿಸಿದರು.

    ವಕ್ತಾರರ ರೀತಿ ಮಾಹಿತಿ ನೀಡಲು ಸಾಧ್ಯವಿಲ್ಲ

    ಎಸ್‌ಐಟಿ ತನಿಖೆ ಯಾವ ರೀತಿ ನಡೆಯುತ್ತಿದೆ ಎಂದು ವಕ್ತಾರರ ರೀತಿಯಲ್ಲಿ ತಾವು ವಿವರ ನೀಡಲು ಸಾಧ್ಯವಿಲ್ಲ. ಎಸ್‌ಐಟಿ ಕಾನೂನು ಪ್ರಕಾರ ದೂರು ಆಧರಿಸಿ ರೇವಣ್ಣ ಅವರನ್ನು ಬಂಧಿಸಿದೆ. ನ್ಯಾಯಾಧಿಶರ ಮುಂದೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಯನ್ನು ಕೆಗೊಳ್ಳುತ್ತಾರೆ ಎಂದು ಹೇಳಿದರು.
    ವಿಡಿಯೋ ಬಹಿರಂಗವಾದ ಮೂಲಗಳು ಸೇರಿದಂತೆ ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲೂ ಎಸ್‌ಐಟಿ ಅಧಿ ಕಾರಿಗಳು ತನಿಖೆ ನಡೆಸುತ್ತಾರೆ. ಕಾರ್ತಿಕ್ ಎಂಬಾತ ಎಲ್ಲಿದ್ದಾರೆ? ಎಂಬ ಬಗ್ಗೆಯೂ ಎಸ್‌ಐಟಿ ಅಧಿ ಕಾರಿಗಳಿಗೆ ಮಾಹಿತಿ ಇರಬಹುದು ಎಂದು ಡಾ.ಪರಮೇಶ್ವರ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts