ಸಿಡಿ ಪ್ರಕರಣ : ಗೋಕಾಕ್​ಗೆ ತೆರಳಿದ ಎಸ್​ಐಟಿ ಅಧಿಕಾರಿಗಳು... ರಮೇಶ್ ಜಾರಕಿಹೊಳಿಗೆ ನೋಟೀಸ್ !

CD case
Published on

ಬೆಳಗಾವಿ : ಸಿಡಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡ (ಎಸ್​ಐಟಿ) ನೋಟೀಸ್ ನೀಡಿದೆ.

ಕರೊನಾ ಪಾಸಿಟೀವ್ ಬಂದಿದ್ದರಿಂದ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಗೋಕಾಕ್​ನ ತಮ್ಮ ಮನೆಯಲ್ಲಿ ಕ್ವಾರಂಟೈನ್​ನಲ್ಲಿ ಇದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲು ಇಬ್ಬರು ಎಸ್​ಐಟಿ ಅಧಿಕಾರಿಗಳು ಇಂದು ಗೋಕಾಕ್​ಗೆ ಆಗಮಿಸಿ, ಅವರ ಗೃಹಕಚೇರಿಗೆ ಭೇಟಿ ನೀಡಿದರು ಎನ್ನಲಾಗಿದೆ.

ಆದರೆ ರಮೇಶ್ ಜಾರಕಿಹೊಳಿ ಅವರು ಲಭ್ಯವಾಗದಿದ್ದರಿಂದ, ಸಹೋದರ ಬಾಲಚಂದ್ರ ಜಾರಕಿಹೊಳಿ‌ ಅವರ ಕಚೇರಿಗೆ ತೆರಳಿದ ಅಧಿಕಾರಿಗಳು ಏಪ್ರಿಲ್ 20 ರಂದು 4 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ ಎನ್ನಲಾಗಿದೆ.

ಕೆಲಸದ ಆಮಿಷವೊಡ್ಡಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮೋಸ ಮಾಡಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಆರೋಪಿಸಿದ್ದಳು. ಈ ಕುರಿತು ಈಗಾಗಲೇ ಯುವತಿಯ ಸುದೀರ್ಘ ವಿಚಾರಣೆ ನಡೆಸಿರುವ ಎಸ್​ಐಟಿ, ಆಕೆ ವಾಸವಾಗಿದ್ದ ಬೆಂಗಳೂರಿನ ಪಿಜಿಗೆ ಭೇಟಿ ನೀಡಿ ಅಲ್ಲಿಂದಲೂ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಇದೀಗ ರಮೇಶ್ ಜಾರಕಿಹೊಳಿ ಅವರ ವಿಚಾರಣೆಗೆ ಸಮಯ ನಿಗದಿ ಮಾಡಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net