More

    ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದತಿಗೆ SIT ಮನವಿ!

    ಬೆಂಗಳೂರು: ಹಾಸನದ ಹಾಲಿ ಸಂಸದ, ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿದ್ದಂತೆ ಈ ರೀತಿ ವಿದೇಶಕ್ಕೆ ಹಾರುವ ಮೂಲಕ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಸಹ ಕೇಳಿಬಂದಿದೆ. ಈಗಾಗಲೇ ಚುರುಕು ತನಿಖೆಯನ್ನು ಕೈಗೊಂಡಿರುವ ಎಸ್​ಐಟಿ ತಂಡ, ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.

    ಇದನ್ನೂ ಓದಿ: ಐಪಿಎಲ್ ಕ್ವಾಲಿಫೈಯರ್-1ರಲ್ಲಿ ಗೆದ್ದವರಿಗೆ ಫೈನಲ್ ಟಿಕೆಟ್: ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ…

    ಈ ಪ್ರಕರಣ ಬೆಳಕಿಗೆ ಬಂದು ಇಂದಿಗೆ ಒಂದು ತಿಂಗಳು ಸಮೀಪಿಸುತ್ತಿದ್ದರೂ ಪ್ರಜ್ವಲ್ ರೇವಣ್ಣ ಮಾತ್ರ ಇನ್ನೂ ವಿದೇಶದಿಂದ ಬೆಂಗಳೂರಿಗೆ ವಾಪಾಸ್ ಆಗಿಲ್ಲ. ಸದ್ಯ ಇದು ಎಸ್​ಐಟಿಗೆ ದೊಡ್ಡ ತಲೆನೋವಾಗಿದ್ದು, ಬಂಧನದ ವಾರೆಂಟ್ ಉಲ್ಲೇಖ ಮಾಡಿ, ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ರವಾನಿಸಿದೆ. ಈ ಕೂಡಲೇ ಪ್ರಜ್ವಲ್​ಗೆ ಸಂಬಂಧಿಸಿದ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸಬೇಕು ಎಂದು ಪತ್ರದ ಮುಖೇನ ಮನವಿ ಮಾಡಿರುವುದು ತಿಳಿದುಬಂದಿದೆ.

    ಇನ್ನು ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, “ಪ್ರಜ್ವಲ್ ನಿಮಗೆ ಎಚ್​.ಡಿ. ದೇವೇಗೌಡರು ಮತ್ತು ನಮ್ಮ ಮೇಲೆ ಗೌರವವಿದ್ದರೇ ದಯವಿಟ್ಟು ರಾಜ್ಯಕ್ಕೆ ಹಿಂತಿರುಗಿ. ನೀವು ಎಲ್ಲಿದ್ದರೂ 24-48 ಗಂಟೆಯೊಳಗೆ ಆಗಮಿಸಿ, ಎಸ್ಐಟಿ ತಂಡದ ಮುಂದೆ ಶರಣಾಗಿ ತನಿಖೆಗೆ ಸಹಕಾರ ನೀಡಿ” ಎಂದು ಮನವಿ ಮಾಡಿದರು,(ಏಜೆನ್ಸೀಸ್). 

    ನಿವೃತ್ತಿ ಬಗ್ಗೆ ನಮಗೆ ಸ್ಪಷ್ಟನೆ ಇಲ್ಲ! ಆದ್ರೆ, ಹೋಗುವ ಮುನ್ನ ಧೋನಿ ಹೇಳಿದ್ದು ಇದೊಂದು ಮಾತು…

    ಲೀಗ್​ನಿಂದ ಹೊರಬಿದ್ದ MI​ಗೆ ನೀತಾ ಅಂಬಾನಿ ಕ್ಲಾಸ್​; ರೋಹಿತ್​, ಹಾರ್ದಿಕ್​ಗೆ ವಿಶೇಷ ಕಿವಿಮಾತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts