ಪ್ಯೂಪಾ ಕವನ ಸಂಕಲನಕ್ಕೆ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ

award
Published on

ಉಡುಪಿ: ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್​ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಬೆಂಗಳೂರಿನ ಶಶಿ ತರೀಕೆರೆ ಅವರ ಪ್ಯೂಪಾ ಕವನ ಸಂಕಲನ ಆಯ್ಕೆಯಾಗಿದೆ ಎಂದು ಸಂಸತಿ ವಿಶ್ವ  ಪ್ರತಿಷ್ಠಾನ ಸಂಚಾಲಕರಾದ ರವಿರಾಜ್​ ಎಚ್​.ಪಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಸತಿ ವಿಶ್ವ ಪ್ರತಿಷ್ಠಾನ 2024ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಪ್ರಶಸ್ತಿಗೆ ಆಹ್ವಾನಿಸಿದ್ದು, 88 ಕೃತಿಗಳು ಸ್ವೀಕೃತವಾಗಿವೆ. ಹಿರಿಯ ಲೇಖಕ ಶೂದ್ರ ಶ್ರೀನಿವಾಸ್​ ಮತ್ತು ವಿಮರ್ಶಕ ಪ್ರೊ. ಎಚ್​. ದಂಡಪ್ಪ ಅವರು ತೀರ್ಪುಗಾರರಾಗಿ ಸಹಕರಿಸಿದ್ದರು ಎಂದರು.

ಪ್ರಶಸ್ತಿ ಸಮಿತಿ ಸಂಚಾಲಕಿ ಪೂರ್ಣಿಮಾ ಜನಾರ್ದನ್​ ಮಾತನಾಡಿ, ಪ್ರಶಸ್ತಿಯು 10 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿದೆ. ನವೆಂಬರ್​ ತಿಂಗಳಲ್ಲಿ ಅಂಬಲಪಾಡಿಯ ಮಹಾಕಾಳಿ ಜನಾರ್ದನ ದೇವಸ್ಥಾನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನದ ನಿರ್ದೇಶಕ ನಾರಾಯಣ ಮಡಿ ಹಾಗೂ ಕವಿತಾ ಎನ್​. ಮಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net