ಬಂಗಾಳಕೊಲ್ಲಿಯ ಕಿನಾರೆಗೆ ಬಂದಿದೆ ಬೆಚ್ಚಿ ಬೀಳಿಸುವ ಸಿತ್ರಾಂಗ್ ಚಂಡಮಾರುತ...

cyclone
Published on

ನವದೆಹಲಿ: ಅಂಡಮಾನ್​ ಬಳಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಆದ ಕಾರಣ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಕಿನಾರೆಗಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ‘

ಮಂಗಳವಾರ (ಅ.25) ಪ್ರತಿ ಗಂಟೆಗೆ 110 ಕಿ.ಮೀ ವೇಗದಲ್ಲಿ ಬೀಸುವ ಗಾಳಿ ಕಿನಾರೆಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶುಕ್ರವಾರ (ಅ.21) ಕೇಂದ್ರದ ಮಂತ್ರಿ ರಾಜೀವ್ ಗೌಬ್ ರಾಜ್ಯ ಸರ್ಕಾರಗಳ ಮತ್ತು ಇತರೆ ಸರ್ಕಾರಿ ಸಂಸ್ಥೆಗಳ ತಯಾರಿಯನ್ನು ಪರಿಶೀಲಿಸಿದರು. ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಂಸ್ಥೆ ನಡೆಸಿದ ಸಭೆಯಲ್ಲಿ ಮಾತನಾಡಿದ ಗೌಬಾ 'ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯ ಸರ್ಕಾರಗಳ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕೇಂದ್ರದ ಏಜೆನ್ಸಿಗಳು ತೆಗೆದುಕೊಳ್ಳಬೇಕು' ಎಂದು ಹೇಳಿದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net